MALENADUTODAY.COM |SHIVAMOGGA| #KANNADANEWSWEB
ಮಾ.10 ರಂದು ವಿದ್ಯುತ್ ವ್ಯತ್ಯಯ
220 ಕೆವಿ ಎಂ.ಆರ್.ಎಸ್ ಕವಿಪ್ರನಿನಿ ಶಿವಮೊಗ್ಗ ಇವರು 110/11 ಕೆವಿ ವಿ.ವಿ.ಕೇಂದ್ರ, ಎಂಆರ್‍ಎಸ್ (MRS) ಶಿವಮೊಗ್ಗ ಇಲ್ಲಿ ಮಾರ್ಚ್ 10 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವ ಪ್ರಯುಕ್ತ 11 ಕೆವಿ ಎಫ್-5 ಫೀಡರ್‍ನ ಎಂಆರ್‍ಎಸ್ ವಾಟರ್ ಸಪ್ಲೈ, ಎಂಆರ್‍ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಜೌಟ್, ಪ್ರಿಯಾಂಕ ಲೇಔಟ್ ಹಾಗೂ 11 ಕೆವಿ ಎಫ್-3 ಫೀಡರ್‍ನ ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿವಿಧೆಡೆ ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ
ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗದ ಪಿಳ್ಳಂಗಿರಿ ಶಾಖಾ ವ್ಯಾಪ್ತಿಯ ಎಫ್-2 ಹೊಳೆಹೊನ್ನೂರು ಫೀಡರ್ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯಲ್ಲಿ ಮಾರ್ಚ್ 10 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸಂತೆಕಡೂರು ಗ್ರಾಮದ 66/11 ಕೆವಿ ವಿವಿ ಕೇಂದ್ರದ ಎಫ್-1,2,3 ರಲ್ಲಿ ಕುಡಿಯುವ ನೀರು ಮತ್ತು ಎಪ್4 ರಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೂತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮಾಜಿ ಹೊಸರೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶದ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ಮಾರ್ಚ್ 10 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರಧಾನಮಂತ್ರಿ ಉದ್ಯೋಗ ಸೃಜನೆ ಯೋಜನೆ ಅರಿವು ಕಾರ್ಯಕ್ರಮ
ಜಂಟಿ ನಿರ್ದೇಶಕರ ಕಚೇರಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಪ್ಪ ನಾಯಕ ಕಚೇರಿ ಸಂಕೀರ್ಣ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ದಿ: 10-03-2023 ರಂದು ಬೆಳಿಗ್ಗೆ 10:30 ಕ್ಕೆ ಪ್ರಧಾನ ಮಂತ್ರಿ ಉದ್ಯೋಗ ಸೃಜನೆ ಯೋಜನೆಯ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳು/ಉದ್ದಿಮೆದಾರರು/ನಿರುದ್ಯೋಗಿ ಯುವಕ ಯುವತಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ ದೂ.ಸಂಖ್ಯೆ-08182-222802 ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #
