SHIKARIPURA

ಶಿಕಾರಿಪುರ: ಕರೆಂಟ್​ ಶಾಕ್​ , ಲೈನ್‌ಮ್ಯಾನ್ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿಕಾರಿಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ  ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದಲ್ಲಿ ಸಂಭವಿಸಿದೆ . ಮೃತರನ್ನು 52 ವರ್ಷದ ಹರೀಶ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗ: ಜಿಲ್ಲೆಯ ಮೂವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ!

ಶನಿವಾರ ಶಿಕಾರಿಪುರ ಪಟ್ಟಣದಾದ್ಯಂತ ಸುರಿದ ಭಾರೀ ಮಳೆಗೆ ಶಿವಮೊಗ್ಗ ರಸ್ತೆಯಲ್ಲಿರುವ ಕೆಇಬಿ ಸ್ಟೇಷನ್ ಮುಂಭಾಗದಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿತ್ತು . ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತುಂಡಾದ ತಂತಿಯನ್ನು ಸರಿಪಡಿಸಲು ಹರೀಶ್ ಅವರು ಮುಂದಾಗಿದ್ದರು. ಆದರೆ, ದುರಸ್ತಿ ಕಾರ್ಯದ ನಡುವೆ ಹಠಾತ್ತನೆ ವಿದ್ಯುತ್ ಪ್ರವಹಿಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು.

ವಿದ್ಯುತ್ ಶಾಕ್‌ನಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳದಲ್ಲಿದ್ದ ಸಹೋದ್ಯೋಗಿಗಳು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು . ಆದರೆ, ಚಿಕಿತ್ಸೆಯು ಫಲಕಾರಿಯಾಗದೆ ಹರೀಶ್ ಅವರು ಕೊನೆಯುಸಿರೆಳೆದಿದ್ದಾರೆ. 

MESCOM Lineman Electrocuted in Shikaripura

MESCOM Lineman Electrocuted in Shikaripura
MESCOM Lineman Electrocuted in Shikaripura
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.