ಶಿವಮೊಗ್ಗ, ಸಾಗರ , ಭದ್ರಾವತಿ , ಮಂಗಳೂರು ಸೇರಿ 11 ದಿನಗಳ ಕಾಲ ಮೆಸ್ಕಾಂ ಆನ್‍ಲೈನ್ ಸೇವೆ 10 ದಿನ ಸ್ಥಗಿತ

ಹಂಚಿಕೊಳ್ಳಿ
WhatsApp Facebook X Telegram

Shivamogga Mar 7, 2024   ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದ ಎಲ್ಲಾ ಎಸ್ಕಾಂಗಳ RAPDRP –  ಗ್ರಾಹಕರಿಗೆ ವಿದ್ಯುತ್ ಬಿಲ್ಲುಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಸೇವೆಗಳು ಮಾ. 10 ರಿಂದ 19 ರವರೆಗೆ 10 ದಿನಗಳ ಕಾಲ ಲಭ್ಯವಿರುವುದಿಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಹೀಗಾಗಿ ನಗರ ಪ್ರದೇಶಗಳಾದ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರುಗಳಲ್ಲಿ ಮೇಲ್ಕಂಡ ದಿನಗಳಲ್ಲಿ, ವಿವರಿಸಲಾದ  ಸೇವೆಗಳು ಲಭ್ಯವಿರುದಿಲ್ಲ ಎಂದು ಹೇಳಲಾಗಿದೆ.

ಉನ್ನತೀಕರಿಸಿದ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಸೇವಾ ಸ್ಥಗಿತ ಕಾಲದಲ್ಲಿ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor