ಒಂದೇ ದಿನ ನಗರದ 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

prathapa thirthahalli
Prathapa thirthahalli - content producer

ಶಿವಮೊಗ್ಗ: ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿಗಳ ಕಾರಣದಿಂದಾಗಿ ಡಿಸೆಂಬರ್ 11, 2025 ರಂದು ಶಿವಮೊಗ್ಗ ನಗರ ಮತ್ತು ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮೆಸ್ಕಾಂನ ನಿರ್ವಹಣಾ ಕಾಮಗಾರಿಗಳಿಗೆ ಸಹಕರಿಸುವಂತೆ ಕಂಪನಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.

MESCOM Power Cut  ನಗರ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತ

ಶಿವಮೊಗ್ಗ ನಗರದ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 11 ರಂದು ಬೆಳಗ್ಗೆ 9:00 ರಿಂದ ಸಂಜೆ 6:00 ಗಂಟೆಯವರೆಗೆ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಸಮಯದಲ್ಲಿ ವಿದ್ಯುತ್ ಇರದ ಪ್ರದೇಶಗಳೆಂದರೆ: ಗಾಂಧಿಬಜಾರ್, ಓ ಟಿ ರಸ್ತೆ, ಎಲೆರೇವಣ್ಣ ಕೇರಿ, ಕುಂಬಾರಗುಂಡಿ, ತಿರುಪಳಯ್ಯನ ಕೇರಿ, ಸಿದ್ದಯ್ಯರಸ್ತೆ, ತಿಮ್ಮಪ್ಪನಕೊಪ್ಪಲು, ಎಂಕೆಕೆ ರಸ್ತೆ, ಉಪ್ಪಾರಕೇರಿ, ಕಸ್ತೂರಿಬಾ ರಸ್ತೆ, ಕೆ.ಆರ್.ಪುರಂ, ಭರ್ಮಪ್ಪನಗರ ಮತ್ತು ಸುತ್ತಮುತ್ತಲಿನ ವಸತಿ ಪ್ರದೇಶಗಳು.

ಅಲ್ಲದೆ, ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯ 11 ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಇರುವುದರಿಂದ, ಅದೇ ದಿನ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರುಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಎ.ಕೆ.ಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೂ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.

MESCOM Power Cut  ಗ್ರಾಮೀಣ ಪ್ರದೇಶಗಳಲ್ಲಿ ವ್ಯತ್ಯಯ

ಶಿವಮೊಗ್ಗ ತಾಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಸೆಂಬರ್ 11 ರಂದು ಬೆಳಗ್ಗೆ 9:00 ರಿಂದ ಸಂಜೆ 6:00 ಗಂಟೆಯವರೆಗೆ ಎಫ್-2, ಎಫ್-3, ಎಫ್-4, ಎಫ್-5 ಮತ್ತು ಎಫ್-6 ಮಾರ್ಗಗಳಿಂದ ವಿದ್ಯುತ್ ಪಡೆಯುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಗ್ರಾಮಗಳಲ್ಲಿ ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ ಪ್ರದೇಶ, ಸಕ್ಕರೆ ಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹೊಸಹಳ್ಳಿ, ಮುಳ್ಳೆರೆ, ಆನೆಬಿಡಾರ, ತಿಮ್ಮಾಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳು ಸೇರಿವೆ.

ಇದಲ್ಲದೆ, ಅದೇ ದಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿಯೂ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9:00 ರಿಂದ ಸಂಜೆ 6:00 ಗಂಟೆಯವರೆಗೆ ಗ್ರಾಮಾಂತರ ಪ್ರದೇಶಗಳಾದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಎಲ್ಲ ಪ್ರದೇಶಗಳ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.

MESCOM Power Cut Shivamogga City& Rural Blackout

MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga
MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Shivamogga power cut Power cut shivamogga Mescom power cut Power cut shivamogga shivamogga
Share This Article