mescom power cut shivamogga ಶಿವಮೊಗ್ಗ : ಮೆಸ್ಕಾಂ ಶಿವಮೊಗ್ಗ ವಿಭಾಗ, ನಾಳೆ ಅಂದರೆ ಮೇ 14 ರಂದು ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ ಎಂದು ಪ್ರಕಟಣೆಯನ್ನು ನೀಡಿದೆ. ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್ 3/4/14/20ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಆದಕಾರಣ ಮೇ 14 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಆಗಲಿದೆ ಎಂದು ತಿಳಿಸಿದೆ.
ಕರೆಂಟ್ ಇರಲ್ಲ /mescom power cut shivamogga
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಮೆ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆ.ಎಂ.ಎಫ್.ಡೈರಿ ಈ ಪ್ರದೇಶ ಹಾಗೂ ಇವುಗಳಿಗೆ ಹೊಂದಿಕೊಂಡಿರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.