ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ! ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ?

Meteorological Department has predicted moderate rain in Shimoga districtಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ! ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ?

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS

ಮಳೆಯಿಲ್ಲ  ..ಮಳೆಯಿಲ್ಲ.. ಮಳೆ ಬರಿಸುವ ಮೋಡಗಳು ಕಾಣಿಸುತ್ತಿಲ್ಲ ಎಂದು ಮಲೆನಾಡಿಗರೇ ಹೇಳುತ್ತಿದ್ದಾರೆ. ಈ ನಡುವೆ ಮತ್ತೆ ಮಳೆಯಾಗುವ ಶುಭ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಾಧಾರಣ ಮಳೆಯ ಸೂಚನೆಯನ್ನು ಐಎಂಡಿ ಬೆಂಗಳೂರು ನೀಡಿದೆ

ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಹಸಿರು ಬಣ್ಣದಿಂದ ಗುರುತು ಮಾಡಿದ್ದು ಮೂರು ದಿನಗಳ ನಂತರ ನೀಲಿ ಬಣ್ಣದಲ್ಲಿ ಗುರುತು ಮಾಡಿದೆ. ಇದರ ಪ್ರಕಾರ, ಶಿವಮೊಗ್ಗ ಶೇಕಡಾ ಐವತ್ತು ಹಾಗೂ ಐವತ್ತಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಇನ್ನೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಕಳೆದ 24 ಗಂಟೆಯ ಮಾಹಿತಿ ಪ್ರಕಾರ ಶಿವಮೊಗ್ಗದ ಗಡಿ ಭಾಗದಲ್ಲಿ 65 ಮಿಲೀಮೀಟರ್​ನಷ್ಟು ಮಳೆಯಾಗಿದ್ದು, ಉಳಿದಂತೆ ಸಾಧಾರಣ ಮಳೆಯಾಗಿದೆ. ಇವತ್ತು ಕೂಡ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ 

ಮಳೆ ಮುನ್ಸೂಚನೆ: 

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ksdma ತನ್ನ ಟ್ವಿಟ್ಟರ್​ ನಲ್ಲಿ ತಿಳಿಸಿದೆ. 

ಶಿವಮೊಗ್ಗ, ಬೆಂಗಳೂರು ನಗರ, ತುಮಕೂರು, ಹಾಸನ, ಕೊಪ್ಪಳ, ವಿಜಯಪುರ, ವಿಜಯನಗರ, ಮಂಡ್ಯ, ಧಾರವಾಡ, ಬೆಳಗಾವಿ, ಬೀದರ್, ದಾವಣಗೆರೆ, ಮೈಸೂರು, ಹಾವೇರಿ, ಬಾಗಲಕೋಟೆ, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆಯಂತೆ. 

ಇನ್ನೂ ರಾಜ್ಯಗಳ ವಿವಿಧ ಜಲಾಶಯಗಳಲ್ಲಿನ ನೀರಿ ಮಟ್ಟದ ವಿವರವನ್ನು ಇಲ್ಲಿ ನೀಡಲಾಗಿದೆ ಕ್ಲಿಕ್ ಮಾಡಿ ಓದಿ

ಇನ್ನಷ್ಟು ಸುದ್ದಿಗಳು