ಅರಣ್ಯಗಳಲ್ಲಿ ಇನ್ಮುಂದೆ ಜಾನುವಾರುಗಳನ್ನು ಮೇಯಿಸುವಂತಿಲ್ಲ : ಕಾರಣವೇನು

prathapa thirthahalli
Prathapa thirthahalli - content producer

Minister Eshwar Khandre ಬೆಂಗಳೂರು :ಕರ್ನಾಟಕದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ದನಕರು ಕುರಿ ಮೇಕೆಗಳನ್ನು  ಮೇಯಿಸುವುದನ್ನು ನಿಷೇಧಿಸುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದಕ್ಕೆ ಹಲವು ಕಾರಣಗಳನ್ನು ಸಹ ನೀಡಲಾಗಿದೆ.

Minister Eshwar Khandre ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ

ಪರಿಸರ ಪ್ರೇಮಿಗಳ ಅಭಿಪ್ರಾಯದಂತೆ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಮೇಯಲು ಬಿಡುವುದರಿಂದ, ಹೊಸದಾಗಿ ಮೊಳಕೆಯೊಡೆದ ಸಣ್ಣ ಸಸಿಗಳು ನಾಶವಾಗುತ್ತವೆ. ಇದರಿಂದ ಅರಣ್ಯದ ಸ್ವಾಭಾವಿಕ ಬೆಳವಣಿಗೆಗೆ ಅಡ್ಡಿಯುಂಟಾಗುತ್ತದೆ. ಜೊತೆಗೆ, ಅರಣ್ಯದಲ್ಲಿ ಮೇಯುವ ಸಾಕುಪ್ರಾಣಿಗಳು ಸ್ಥಳೀಯ ಸಸ್ಯಹಾರಿ ವನ್ಯಜೀವಿಗಳಿಗೆ ಮೇವಿನ ಕೊರತೆಯನ್ನು ಉಂಟುಮಾಡುತ್ತವೆ. ಹಾಗೆಯೇ ನಾಡಿನಿಂದ ಕಾಡಿಗೆ ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ. ಇದು ವನ್ಯಜೀವಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ, ಮಾನವ-ವನ್ಯಜೀವಿ ಸಂಘರ್ಷಕ್ಕೂ ಕಾರಣವಾಗಬಹುದು.

ಕಾಡಿನೊಳಗೆ ಮೇಯಿಸಲು ಹೋಗುವ ದನಗಾಹಿಗಳು ವನ್ಯಜೀವಿಗಳ ದಾಳಿಗೆ ತುತ್ತಾಗಿ ಮೃತಪಟ್ಟರೆ, ಅಂತಹ ಸಂದರ್ಭಗಳಲ್ಲಿ ಅವರಿಗೆ ಪರಿಹಾರ ನೀಡಲು ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಅವಕಾಶವಿಲ್ಲ. ಈ ಅಂಶವನ್ನು ವನ್ಯಜೀವಿ ಪ್ರೇಮಿಗಳು ಮತ್ತು ಪರಿಸರವಾದಿಗಳು ಗಂಭೀರವಾಗಿ ಪರಿಗಣಿಸಿದ್ದು, ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ಕೂಡಲೇ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೇಯುತ್ತಿರುವ ದನಗಳು

 

Share This Article