ಶಿವಮೊಗ್ಗದಲ್ಲಿ ಫಿಲ್ಮ್ ಸಿಟಿ ನಿರ್ಮಾಣ |ಮತ್ತೊಂದು ಅಪ್​ಡೇಟ್ ನೀಡಿದ ಸಚಿವ ಮಧು ಬಂಗಾರಪ್ಪ

ಹಂಚಿಕೊಳ್ಳಿ
WhatsApp Facebook X Telegram
Minister Madhu Bangarappa Assures Land for Film City in Shivamogga
Minister Madhu Bangarappa Assures Land for Film City in Shivamogga

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ ಎಂದು ಕಂಠೀರವ ಸ್ಟುಡಿಯೋಸ್‌ನ ಅಧ್ಯಕ್ಷ ಮೆಹಬೂಬ್ ಪಾಷ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಫಿಲ್ಮ್ ಸಿಟಿ ನಿರ್ಮಾಣ

ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರು ಫಿಲ್ಮ್ ಸಿಟಿ ನಿರ್ಮಾಣ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ ಎಂದಿದ್ದಾರೆ.

ಫಿಲ್ಮ್ ಸಿಟಿಯನ್ನು ಕೇವಲ ಸಿನಿಮಾ ಚಿತ್ರೀಕರಣಕ್ಕೆ ಸೀಮಿತಗೊಳಿಸದೆ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಹೂಡಿಕೆ, ಸ್ಥಳೀಯ ಆರ್ಥಿಕತೆ ಹಾಗೂ ಸಾಂಸ್ಕೃತಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸುವ ಅಗತ್ಯವಿದೆ ಎಂದು ಮೆಹಬೂಬ್ ಪಾಷ ಅಭಿಪ್ರಾಯಪಟ್ಟಿದ್ದಾರೆ.

ಫಿಲ್ಮ್ ಸಿಟಿ ನಿರ್ಮಾಣದಿಂದ ನಟರು, ತಂತ್ರಜ್ಞರು, ಕ್ಯಾಮೆರಾಮನ್‌ಗಳು, ಸಂಕಲನಕಾರರು, ಕಲಾವಿದರು ಹಾಗೂ ಕಾರ್ಮಿಕರು ಸೇರಿದಂತೆ ಸಾವಿರಾರು ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳು ದೊರೆಯಲಿವೆ. ಇದರೊಂದಿಗೆ ಹೋಟೆಲ್, ವಸತಿ, ಸಾರಿಗೆ, ಆಹಾರ ಹಾಗೂ ನಿರ್ಮಾಣ ಕ್ಷೇತ್ರಗಳಿಗೂ ಉತ್ತೇಜನ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor