ಶಿವಮೊಗ್ಗ: ಜಿಲ್ಲೆಯ ಒಂದು ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ತಾಲೂಕು ಒಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಘಟನೆ ವರದಿಯಾಗಿತ್ತು. ಇದೀಗ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂದು ದೃಢಪಟ್ಟಿದೆ.
ಬಾಲಕಿಯನ್ನು ವಿಚಾರಿಸಿದಾಗ, ಅಪ್ರಾಪ್ತ ಯುವಕನೊಬ್ಬ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿರುವುದು ಗೊತ್ತಾಗಿದೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

