ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ನರ್ಸಿಂಗ್ ವಿದ್ಯಾರ್ಥಿ ಮೃತದೇಹ ಚಿಕ್ಕಮಗಳೂರಿನ ಪವಿತ್ರವನದ ಬಳಿ ಪತ್ತೆ

ಹಂಚಿಕೊಳ್ಳಿ
WhatsApp Facebook X Telegram
ಅಪರಾಧ ಸುದ್ದಿಗಳಿಗೆ ಸಂಬಂಧಿಸಿದ ಸಾಂದರ್ಭಿಕ ಚಿತ್ರ
crime news image malenadutoday

ಸುದ್ದಿಯ ಸ್ಥಳ: Chikkamagaluru, Karnataka

ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಪವಿತ್ರವನದ ಸಮೀಪ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರಿನ ಪವಿತ್ರವನದ ಬಳಿ ಪತ್ತೆ

ರಕ್ಷಿತ್ ಚಿಕ್ಕಮಗಳೂರಿನ ಸಿಐಎಂಎಸ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದನು. ನವೆಂಬರ್ 7ರಂದು ಮಧ್ಯಾಹ್ನ ಸುಮಾರು 12.34ರ ವೇಳೆಗೆ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದನು. ವಿದ್ಯಾರ್ಥಿ ಕಾಣೆಯಾಗಿರುವುದು ತಿಳಿಯುತ್ತಿದ್ದಂತೆ ಆತನ ಕುಟುಂಬಸ್ಥರು ಹಾಗೂ ಪರಿಚಯಸ್ಥರು ಹುಡುಕಾಟ ಆರಂಭಿಸಿದ್ದರು.

ರಕ್ಷಿತ್ ಎಲ್ಲಿಗೆ ತೆರಳಿದ್ದಾನೆ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದರು. ಹುಡುಕಾಟ ನಡೆಸಿದರೂ ಐದು ದಿನಗಳವರೆಗೆ ಆತನ ಸುಳಿವು ಪತ್ತೆಯಾಗಿರಲಿಲ್ಲ.

ಈ ನಡುವೆ ಶುಕ್ರವಾರ ಚಿಕ್ಕಮಗಳೂರು ನಗರದ ಪವಿತ್ರವನದ ಸಮೀಪ ರಕ್ಷಿತ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor