missing case : ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

ಹಂಚಿಕೊಳ್ಳಿ
WhatsApp Facebook X Telegram
missing case
missing case ಇಬ್ಬರು ವ್ಯಕ್ತಿಗಳು ಕಾಣೆಯಾಗಿದ್ದಾರೆ

missing case : ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

missing case : ಶಿವಮೊಗ್ಗ : ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಕಾಣೆಯಾಗಿದ್ದು, ಕಾಣೆಯಾದವರು ಎಲ್ಲಾದರು ಕಂಡರೆ ಮಾಹಿತಿ ನೀಡಿ ಎಂದು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ

ಶಿಕಾರಿಪುರ ತಾಲೂಕು ಶಿರಾಳಕೊಪ್ಪ ನಗರ ಹಳ್ಳೂರುಕೇರಿ ವಾಸಿ ತಬ್ರೇಜ್ ಖಾನ್ ಎಂಬುವವರ ಮಗ ತಾಹೀರ್ ಖಾನ್ ಎಂಬ 26 ವರ್ಷದ ಯುವಕ ಏಪ್ರಿಲ್ 2023ರಲ್ಲಿ ಕಾಣೆಯಾಗಿದ್ದು ಈವರೆಗೂ ಮನೆಗೆ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.2 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ. 

ಶಿರಾಳಕೊಪ್ಪ ನಗರ, ಬೆಲವಂತನಕೊಪ್ಪ ವಾಸಿ ಚೇತನ ಕುಮಾರ್ ಎಂಬುವವರ ಅಣ್ಣ ಶ್ರೀಧರ ಬಿನ್ ಜಗನ್ನಾಥ ಎಂಬ 40 ವರ್ಷದ ವ್ಯಕ್ತಿ ನವೆಂಬರ್ 2024 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. 

ಈ ಇಬ್ಬರು ವ್ಯಕ್ತಿಗಳ ಬಗ್ಗೆ ಸುಳಿವು ಸಿಕ್ಕಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ಪೊ.ನಂ.: 9480803367 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor