ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 27, 2025, ನವೆಂಬರ್ ಕ್ರಾಂತಿ ಇನ್ನಷ್ಟು ಸ್ಪಷ್ಟವಾಗುತ್ತಿದ್ದಂತೆ, ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ. ಈ ಬಗ್ಗೆ ಪಕ್ಷದ ಪ್ರಮುಖರಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೇನೆ ಅಂತಾ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದ್ದಾರೆ.
ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ನಡೆಯುತ್ತಿದೆ. ನಾನು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಇದಕ್ಕೆ ಕಾರಣವೂ ಇದೆ. ಮೂರು ಬಾರಿ ಶಾಸಕನಾಗಿದ್ದೇನೆ. ಆದ್ದರಿಂದ ನನಗೂ ಸಚಿವ ಸ್ಥಾನ ನೀಡಿ ಎಂದು ಕೇಳಿದ್ದೇನೆ ಎಂದು ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಹೆದರಿ ಓಡಿದ್ದಾತನ ಬೆನ್ನಟ್ಟಿದ್ದ ಖಾಕಿ ಸಿಕ್ತು ಭರ್ಜರಿ ಬೇಟೆ! ಸಾಗರ,ಸೊರಬ, ಕಾರ್ಗಲ್ ದೇಗುಲದಲ್ಲಿ ಕಳ್ಳತನದ ರಹಸ್ಯ!
ನಿನ್ನೆ ದಿನ ಸಾಗರದಲ್ಲಿ ಮಾತನಾಡಿದ ಅವರು ನನಗೆ ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷರನ್ನು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾದು ನೋಡೋಣ ಕೊಟ್ಟರೆ ಖುಷಿಯಿಂದ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.MLA Belur Gopalakrishna

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಿಜೆಪಿಯ ದುಡ್ಡು ಹೊಡೆಯುವ ಯೋಜನೆಯಾಗಿತ್ತು : ಬೇಳೂರು ಗೋಪಾಲಕೃಷ್ಣ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
