SAGARA

ಜೋಗದಲ್ಲಿ 90 ಕೋಟಿಯ ಕೆಲಸ! ಬೇಳೂರು ಗೋಪಾಲಕೃಷ್ಣ ಮಹತ್ವದ ಹೇಳಿಕೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Jog Falls Development / ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ / ಸಾಗರ / ಜೋಗ / ಜಿಲ್ಲೆಯ ಪ್ರಸಿದ್ದ ಜಲಪಾತ ಜೋಗ ಜಲಪಾತದ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮತ್ತೊಂದಿಷ್ಟು ಅಪ್​ಡೇಟ್ ಸಿಕ್ಕಿದೆ. ಈ ಸಂಬಂಧ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಮಾತನಾಡಿದ್ದಾರೆ. ಸಾಗರ ಪೇಟೆಯಲ್ಲಿ ನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ನಡೆದ ಮಳೆಗಾಲದ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡ ಅವರು ಜೋಗದ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಪ್ರಸ್ತಾಪಿಸಿದರು.

ಜೋಗ ಜಲಪಾತ ಅಭಿವೃದ್ಧಿ ಕಾಮಗಾರಿ (Jog Falls Development) ಸುಮಾರು 90 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ಆದಾಗ್ಯು, ಇನ್ನೂ 90 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಬೇಕಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಂತಾ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇದೇ ವೇಳೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರಸ್ತೆ ಬದಿಗಳಲ್ಲಿ ಬೆಳೆದಿರುವ ಗಿಡಗಂಟೆಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ.

ಇನ್ನೂ ಇದೇ ಸಂದರ್ಭದಲ್ಲಿ ಬೆಳೆ ವಿಮೆ ಹಾಗೂ ಪ್ರಕೃತಿ ವಿಕೋಪ ಪರಿಹಾರ ವಿತರಣೆಯಲ್ಲಿ ರೈತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಈ ಬಾರಿ ರೈತರಿಗೆ ಕಡಿಮೆ ವಿಮಾ ಪರಿಹಾರ ಬಂದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರ ರನ್ನಾಗಿ ಮಾಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಸಿದರು.

Whatsapp / https://chat.whatsapp.com/JrsZ8He4nN600n0r3tJItz

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರ ಪ್ರಮುಖ ಸೂಚನೆಗಳು

  • ಮಳೆಮಾಪನ ಕೇಂದ್ರಗಳ ಮಾಹಿತಿ ಆಧಾರದ ಮೇಲೆ ಬೆಳೆ ಹಾನಿ ಹಾಗೂ ವಿಮೆ ಪರಿಹಾರದ ಲೆಕ್ಕಾಚಾರ ನಡೆಯು ವುದರಿಂದ ಅವುಗಳ ಕಾರ್ಯನಿರ್ವಹಣೆ ಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು.
  • ಮಳೆಗಾಲದಲ್ಲಿ ಅಧಿಕಾರಿಗಳು ಅನಗತ್ಯವಾಗಿ ರಜೆ ಪಡೆಯದೇ ಕರ್ತವ್ಯದಲ್ಲಿ ಲಭ್ಯವಿರಬೇಕು. ಕುಸಿತ ಸೇರಿದಂತೆ ಯಾವುದೇ ಅವಘಡ ಸಂಭವಿಸಿದರೆ ತಹಸೀಲ್ದಾರ್, ತಾ.ಪಂ. ಇಒ ಹಾಗೂ ಪಿಡಿಒಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
  • ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳಿಗೆ ಅಗತ್ಯ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಇಲ್ಲ. ಕೃಷಿ ಇಲಾ ಖೆಯಲ್ಲಿಸಾಕಷ್ಟು ಪ್ರಮಾಣದ ದಾಸ್ತಾನು ಲಭ್ಯವಿದ್ದು, ರೈತರಿಗೆ ಯಾವುದೇ ತೊಂದರೆ ಆಗದಂತೆ ವಿತರಣೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
  • ಮಳೆಗಾಲದಲ್ಲಿ ಶಾಲೆ ಕಟ್ಟಡಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸ ಬೇಕು. ದುಃಸ್ಥಿತಿಯಲ್ಲಿರುವ ಶಾಲೆಗಳ ಪಟ್ಟಿಯನ್ನು ತಯಾರಿಸಿ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು.
  • ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಸೀಲ್ದಾ‌ರ್ ಆರ್.ಪ್ರತಿಭಾ, ಡಿವೈಎಸ್ಪಿ ಡಾ. ಬೆನಕ ಪ್ರಸಾದ್, ಪ್ರಮುಖರಾದ ಮೌನೇಶ್, ನಾಗಪ್ಪ, ಶಿವಪ್ರಕಾಶ್‌, ಸದಾನಂದ ಸ್ವಾಮಿ ಮತ್ತಿತರರು ಹಾಜರಿದ್ದರು.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ