mla sn channabasappa | ಕಾಂಗ್ರೆಸ್ ನಾಯಕಿ ಪ್ರಿಯಾಂಕಾರವರ ಪತಿ ರಾಬರ್ಟ್ ವಾದ್ರಾರವರ ವಿರುದ್ಧ ಶಿವಮೊಗ್ಗದಲ್ಲಿ ನಗರ ಶಾಸಕ ಎಸ್ಎನ್ ಚೆನ್ನಬಸಪ್ಪ ಆಕ್ರೋಶ ಹೊರಹಾಕಿದ್ದಾರೆ. ಅವರು ಉಗ್ರರಿಗೆ ಶಕ್ತಿ ತುಂಬುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಬರ್ಟ್ ವಾದ್ರಾರವರ ಹೇಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ ಎಂದರು. ಅವರು ಒರ್ವ ಸಂಸದೆಯ ಪತಿಯಾದ ಮಾತ್ರಕ್ಕೆ ಇಂಥಹ ಹೇಳಿಕೆ ಕೊಡುವುದು ಸರಿಯಲ್ಲ ಎಂದರು.
ಪ್ರಸ್ತುತ ಸನ್ನಿವೇಶದಲ್ಲಿ ಇಡೀ ದೇಶ ಒಟ್ಟಾಗಿ ಭಾರತವನ್ನು ಉಳಿಸಿಕೊಳ್ಳ ಬೇಕಿದೆ. ಇಂತಹ ಸಂದರ್ಭದಲ್ಲಿ ಈ ರೀತಿಯ ಹೇಳಿಕೆಗಳು ಶೋಭೆ ತರುವುದಿಲ್ಲ. ಅಂತಹ ವ್ಯಕ್ತಿತ್ವಗಳು ಈ ದೇಶದಲ್ಲಿ ಬದುಕಲು ಲಾಯಕ್ಕಲ್ಲ.
ಇದೀಗ ರಾಬರ್ಟ್ ವಾದ್ರಾ ಸಹ ಅಂತಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮಕೈಗೊಂಡು ಪೊಲೀಸರು ಕೂಡಲೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
mla sn channabasappa : ಪಾಕಿಸ್ತಾನಕ್ಕೆ ಬಾಂಬ್ ಹಾಕಿ ಭಾರತ ಮಾತೆಗೆ ಹೂವು ಹಾಕಿ
ಭಯೋತ್ಪಾದಕರ ದಾಳಿಗೆ ರಾಜ್ಯದ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಭಯೋತ್ಪಾದಕರಿಗೆ ಮನುಷ್ಯತ್ವ ಇರುವುದಿಲ್ಲ. ಭಯೋತ್ಪಾದಕರು ತಮ್ಮ ಜೀವನವನ್ನು ಪಣಕ್ಕಿಟ್ಟು ಜಿಹಾದ್ಗಾಗಿ ಬದುಕುತ್ತಾರೆ. ಈ ರೀತಿ ಕೃತ್ಯವನ್ನು ಎಸಗುವ ಭಯೋತ್ಪಾದಕರನ್ನು ಹುಡುಕಿ ಹುಡುಕಿ ಕೊಲ್ಲಬೇಕು ಹಾಗೆಯೇ ಪಾಕಿಸ್ತಾನಕ್ಕೆ ಬಾಂಬ್ ಹಾಕಿ ಭಾರತ ಮಾತೆಗೆ ಹೂವು ಹಾಕಿ ಎಂಬ ಘೋಷಣೆಗಳು ಕಾರ್ಯಗತವಾಗಬೇಕು. ಈ ಕುರಿತು ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರವರಿಗೆ ವಿನಂತಿಸುತ್ತೇನೆ ಎಂದರು.
ಕಾಂಗ್ರೆಸ್ ನಾಯಕರು ಒಂದೆಡೆ ಭಯೋತ್ಪಾದಕರ ಗುಂಡಿಗೆ ಬಲಿಯಾದ ಕುಟುಂಬದೊಡನೆ ನಾವಿದ್ದೇವೆ ಎಂದು ಹೇಳುತ್ತಾರೆ. ಆದರೆ ಇನ್ನೊಂದೆಡೆ ಈ ಘಟನೆಗೆ ಭದ್ರತಾ ವೈಪಲ್ಯವೇ ಕಾರಣ ಎಂದು ಹೇಳುತ್ತಾರೆ. ಇಂಥಹ ಸಂದರ್ಭದಲ್ಲಿ ಕಾಂಗ್ರೆಸಿಗರು ಇಂಥಹ ಹೇಳಿಕೆಯನ್ನು ನೀಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದರು.
ನೆಹರುರವರು ಈ ಹಿಂದೆ ಭಾರತದಲ್ಲಿರುವ ಅಲ್ಪಸಂಖ್ಯಾತರಿಗೆ ನಾವು ರಕ್ಷಣೆ ಕೊಡುತ್ತೇವೆ, ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ನೀವು ರಕ್ಷಣೆ ಕೊಡಿ ಎಂದು ಒಪ್ಪಂದ ಮಾಡಿಕೊಂಡಿದ್ದರು. ಅದು ಅವರು ಮಾಡಿದ ದೇಶ ದ್ರೋಹದ ಕೆಲಸ. ಈಗ ಪಾಕಿಸ್ತಾನದಲ್ಲಿ ಹಿಂದೂಗಳ ಪರಿಸ್ಥಿತಿ ಬಹಳ ಹದಗೆಟ್ಟಿದೆ. ಇಷ್ಟೆಲ್ಲಾ ಮಾಡಿದ ಕಾಂಗ್ರೆಸಿಗರಿಗೆ ಭದ್ರತಾ ವೈಪಲ್ಯದ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದರು.
mla sn channabasappa : ಪಾಕಿಸ್ತಾನದೊಂದಿಗೆ ಯುದ್ಧ!?
ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಕೈಗೊಂಡಿರುವ ನಿರ್ಧಾರವನ್ನು ಇಡೀ ಜಗತ್ತೇ ಮೆಚ್ಚಿಕೊಂಡಿದೆ. ನಾವು ಬಿಕ್ಷೆ ಕೊಟ್ಟಂತಹ ಪಾಕಿಸ್ತಾನ ಅದು. ಆದರೆ ಆ ವ್ಯಕ್ತಿಗಳು ಈ ರೀತಿಯ ದುಷ್ಕೃತ್ಯವೆಸಗುತ್ತಿದ್ದಾರೆ. ನೆಹರೂ ಕಾಲದಿಂದಲೂ ಹಿಂದೂಗಳೇ ಟಾರ್ಗೆಟ್ ಆಗುತ್ತಿದ್ದರು ಇವತ್ತು ಹಿಂದೂಗಳೇ ಟಾರ್ಗೆಟ್ ಆಗುತ್ತಿದ್ದಾರೆ ಇನ್ನುಮುಂದೆ ಈ ದೇಶದ ಜನ ಭಯ ಪಡುವ ಅಗತ್ಯವಿಲ್ಲ. ಸಂವಿಧಾನ ಬದ್ದವಾಗಿ ಪಾಕಿಸ್ತಾನಕ್ಕೆ ಗಂಟು ಮೂಟೆ ಕಟ್ಟುವ ಪರಿಸ್ಥಿತಿ ನಿರ್ಮಾಣ ಮಾಡಿ ಅಖಂಡ ಭಾರತವನ್ನು ನಿರ್ಮಿಸುತ್ತೇವೆ ಎಂದರು.