SHIVAMOGGA | Dec 26, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಶಾಸಕ ಬಿ.ಕೆ.ಸಂಗಮೇಶ್ವರ್ ರವರ ಆಪ್ತ ಸಹಾಯಕರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನಿನ್ನೆ ರಾತ್ರಿ ವರದಿಯಾಗಿದೆ.
ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ (bk sangameshwara) ರವರ ಆಪ್ತ ಸಹಾಯಕ ಈಶ್ವರ್ ಕೂಡ್ಲಿಗೆರೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ.
ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿ ಪುನಃ ನಗರಕ್ಕೆ ಹಿಂದಿರುಗಿ ಬರುವಾಗ ವಾಹನವೊಂದು ಇವರಿಗೆ ಡಿಕ್ಕಿ ಹೊಡೆದಿದೆ . ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಶಾಸಕರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕುಟುಂಬ ವರ್ಗದವರು, ವಿವಿಧ ಸಂಘ-ಸಂಸ್ಥೆಗಳ ಗಣ್ಯರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.