ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಮೊಹಮ್ಮದ್ ಶಮಿ! 

ಹಂಚಿಕೊಳ್ಳಿ
WhatsApp Facebook X Telegram
Mohammad Shami Retires From Test Cricket
Mohammad Shami Retires From Test Cricket
dasrara add shivamogga

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ : ಭಾರತೀಯ ಕ್ರಿಕೆಟ್ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಸುದೀರ್ಘ ವೃತ್ತಿಜೀವನಕ್ಕೆ ತೆರೆ ಎಳೆದಿರುವ ಅವರು, ಶುಕ್ರವಾರ ರಾತ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ಸಂದೇಶವನ್ನು ಹಂಚಿಕೊಳ್ಳುವ ಮೂಲಕ ಈ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. 

shivamogga dasara add
dasrara add shivamogga
dasrara add shivamogga

2013ರ ನವೆಂಬರ್ 6ರಂದು ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಶಮಿ, ಸರಿಯಾಗಿ 13 ವರ್ಷಗಳ ಬಳಿಕ ಟೆಸ್ಟ್​​ ಕ್ರಿಕೆಟ್​ನಿಂದ ನಿವೃತ್ತಿಯಾಗುತ್ತಿರುವುದಾಗಿ ತಿಳಿಸಿದ್ದಾರೆ. ತಮ್ಮ ಮೊದಲ ಟೆಸ್ಟ್ ಕ್ಯಾಪ್ ಧರಿಸಿದ ಕ್ಷಣವನ್ನು ಸ್ಮರಿಸಿರುವ ಅವರು, ದೇಶಕ್ಕಾಗಿ ಏನಾದರೂ ಸಾಧಿಸಬೇಕು ಎಂಬ ಒಂದೇ ಒಂದು ಕನಸು ತನಗಿತ್ತು ಎಂದು ತಿಳಿಸಿದ್ದು, ಇಲ್ಲಿಯವರೆಗಿನ ಪ್ರತಿ ವಿಕೆಟ್, ಹೋರಾಟ, ಗಾಯ ಹಾಗೂ ಮರು ಆಗಮನವು ತಮಗೆ ಜೀವನದ ಪಾಠ ಕಲಿಸಿದೆ ಎಂದು ಹೇಳಿದ್ದಾರೆ. 

ಟೆಸ್ಟ್ ಕ್ರಿಕೆಟ್ ಕೇವಲ ಆಟವಲ್ಲ, ಬದಲಿಗೆ ತಮ್ಮ ಬೌಲಿಂಗ್ ಬದುಕಿನ ಅತ್ಯಂತ ವಿಶೇಷವಾದ ಭಾಗವಾಗಿತ್ತು. ಮರೆಯಲಾರದ ಸುಂದರ ನೆನಪುಗಳೊಂದಿಗೆ ಈ ಕಠಿಣ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

shivamogga dasara add

ಈ ಸುದೀರ್ಘ ಪಯಣದಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬ ಸಹಆಟಗಾರರು, ತರಬೇತುದಾರರು, ಕುಟುಂಬದ ಸದಸ್ಯರು ಹಾಗೂ ತಮ್ಮ ಮೇಲೆ ನಂಬಿಕೆ ಇಟ್ಟ ಭಾರತೀಯ ಕ್ರೀಡಾಭಿಮಾನಿಗಳಿಗೆ ಶಮಿ ಧನ್ಯವಾದ ಅರ್ಪಿಸಿದ್ದಾರೆ. ಕಷ್ಟದ ಮತ್ತು ಒಳ್ಳೆಯ ಕಾಲದಲ್ಲೂ ತಮ್ಮ ಬೆಂಬಲಕ್ಕೆ ನಿಂತವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

ಆರಂಭಿಕ ದಿನಗಳಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಸಿ ಬೆಂಬಲ ನೀಡಿದ ಬಿಸಿಸಿಐ (BCCI) ಹಾಗೂ ಬಂಗಾಳ ಕ್ರಿಕೆಟ್ ಸಂಘಕ್ಕೆ (CAB) ಶಮಿ ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ತಮ್ಮ ಕ್ರಿಕೆಟ್ ಪ್ರಯಾಣದಲ್ಲಿ ಈ ಸಂಸ್ಥೆಗಳ ಪಾತ್ರ ಹಿರಿದಾದದ್ದು ಎಂದು ಸ್ಮರಿಸಿದ್ದಾರೆ. 

ಒಟ್ಟು 64 ಟೆಸ್ಟ್ ಪಂದ್ಯಗಳನ್ನು ಆಡಿರುವ ಶಮಿ, 6 ಬಾರಿ ಐದು ವಿಕೆಟ್ ಸಾಧನೆಯೊಂದಿಗೆ ಒಟ್ಟು 229 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನ 6/56 ಆಗಿತ್ತು. 2023ರ ಜೂನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಪಂದ್ಯವೇ ಅವರ ಕೊನೆಯ ಟೆಸ್ಟ್ ಪಂದ್ಯವಾಗಿದೆ. ಅದೇ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಕೇವಲ 7 ಇನ್ನಿಂಗ್ಸ್‌ಗಳಲ್ಲಿ 24 ವಿಕೆಟ್‌ಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.

shivamogga dasara add
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor