RAIN NEWS LIVE

ಬಿಗ್​ ನ್ಯೂಸ್​ , 2 ದಿನ ಭಾರೀ ಮಳೆ! ಶಿವಮೊಗ್ಗ ಸೇರಿ ಹಲವೆಡೆ ಆರೆಂಜ್ ಅಲರ್ಟ್! ವಿವರ ಓದಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್


Monsoon / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಮುಂಗಾರು ಮಳೆ ಮುಂದುವರಿಯಲಿದೆ. ಇವತ್ತು ಜು.7 ಮತ್ತು 8ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಹಲವೆಡ ಆರೆಂಜ್ ಅಲರ್ಟ್ ನೀಡಲಾಗಿದೆ.

ಜು.7ರಂದು ಉಡುಪಿ, ಉತ್ತರಕನ್ನಡಜಿಲ್ಲೆಗಳಿಗೆ ಭಾರಿ ಮಳೆಯಾಗುವ ರೆಡ್ ಆಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನುಳಿದಂತೆ ಸಾಧಾರಣ ಮಳೆಯ ನಿರೀಕ್ಷೆ ಇರುವ ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೀದರ್, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ,
ಚಿತ್ರದುರ್ಗ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರುಗ್ರಾಮಾಂತರ, ರಾಮನಗರ, ಮಂಡ್ಯ ಮತ್ತು ಚಾಮರಾಜನಗರಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜು.8ಕ್ಕೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರುಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂದಿನ ಎರಡೂರು ದಿನ ಮಾತ್ರ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ನಂತರ ಮುಂಗಾರು ಮತ್ತೆ ದುರ್ಬಲಗೊಳ್ಳುತ್ತದೆ. ಅದರಲ್ಲೂ ಈ ತಿಂಗಳ ಕೊನೆಯ ಎರಡು ದಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆಯಾಗುತ್ತದೆ ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ