MP BY Raghavendra ಶಿವಮೊಗ್ಗ : ಬಿ.ವೈ ರಾಘವೇಂದ್ರ ಅಭಿಮಾನಿಗಳ ವತಿಯಿಂದ ಆಗಸ್ಟ್ 16 ರಂದು ಸಂಸದ ಬಿ.ವೈ.ರಾಘವೇಂದ್ರರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಭಿಮಾನಿ ಬಳಗದ ಪ್ರಮುಖರಾದ ಬಳ್ಳೆಕೆರೆ ಸಂತೋಷ್ ಹೇಳಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್‌ನ 65ನೇ ಸಂಸ್ಥಾಪನಾ ದಿನಾಚರಣೆ: ಯುವಶಕ್ತಿಗೆ ನಾಯಕರ ಕರೆ!
ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಟ್ಟುಹಬ್ಬ ಆಚರಣೆ ಬೇಡ ಎಂದು ಸಂಸದರು ಮನವಿ ಮಾಡಿದ್ದರೂ, ನಮಗೆ ಅವರ ಜನ್ಮದಿನವನ್ನು ಆಚರಿಸಬೇಕೆಂಬ ಆಸೆಯಿದೆ. ಸಂಸದರೊಬ್ಬರು ಕ್ಷೇತ್ರವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದನ್ನು ತೋರಿಸಿಕೊಟ್ಟ ಮಾದರಿ ಜನಪ್ರತಿನಿಧಿ ರಾಘವೇಂದ್ರ. ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಅವರ ಹುಟ್ಟುಹಬ್ಬದ ಅಂಗವಾಗಿ ಜಿಲ್ಲೆಯಾದ್ಯಂತ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ವಿವರ ನೀಡಿದರು.
ಅಂದು ಬೆಳಿಗ್ಗೆ 7.30ಕ್ಕೆ ವಿನೋಬನಗರದ ಶಿವಾಲಯದಲ್ಲಿ ವಿಶೇಷ ರುದ್ರಾಭಿಷೇಕ ಹಾಗೂ ಬೆಳಿಗ್ಗೆ 9.00ಕ್ಕೆ ರವೀಂದ್ರನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಆಟೋ ಚಾಲಕರ ಸಂಘದಿಂದ ಸಿಹಿ ವಿತರಣೆ ನಡೆಯಲಿದ್ದು, ಬೆಳಿಗ್ಗೆ 11.30ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ.
ಸಂಜೆ 5.30ಕ್ಕೆ ಬಂಟರ ಭವನದಲ್ಲಿ ಬೃಹತ್ ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಗೌರವ ಸನ್ಮಾನ ಸಲ್ಲಿಸಲಾಗುವುದು. ಈ ಸಮಾರಂಭದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರುಗಳಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಡಿ.ಎಸ್. ಅರುಣ್, ಮಾಜಿ ಶಾಸಕರುಗಳಾದ ಎಸ್. ರುದ್ರೇಗೌಡ, ಆರ್.ಕೆ. ಸಿದ್ದರಾಮಣ್ಣ ಸೇರಿದಂತೆ ಬಿಜೆಪಿಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು ಹಾಗೂ ವಿವಿಧ ಸಮಾಜದ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
