SHIMOGA NEWS LIVE

ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠದ ವಿಚಾರದಲ್ಲಿ ಮಹತ್ವದ ಬೆಳವಣಿಗೆ! ರಾಜ್ಯಪಾಲರನ್ನ ಭೇಟಿಯಾದ ಸಂಸದ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

MP BY Raghavendra Demands / ಮಲೆನಾಡು ಟುಡೆ/ ಶಿವಮೊಗ್ಗ / ಸಂಸದ ಬಿ.ವೈ.ರಾಘವೇಂದ್ರ / ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಬೇಕು ಎಂಬ ಹೋರಾಟ ಇದೀಗ ಇನ್ನೊಂದು ಹಂತಕ್ಕೆ ತೆರಳಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ವಕೀಲರು ಹೋರಾಟ ನಡೆಸಿದ್ದರು. ಈ ಹೋರಾಟಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾಗಿತ್ತು. ಇದೀಗ ಈ ಹೋರಾಟಕ್ಕೆ ಪೂರಕವಾಗಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ ಮಾಡಬೇಕು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗುವಂತೆ ತುರ್ತು ಸಲಹೆ ನೀಡುವಂತೆ ಕೋರಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮನವಿ ಸಲ್ಲಿಸಿದ್ದಾರೆ.

ಸಂಸದ ರಾಘವೇಂದ್ರ ಇಂದು ಲೋಕ ಭವನದಲ್ಲಿರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (MP BY Raghavendra Demands) ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಕೋರಿ ವಿವರವಾದ ಮನವಿ ಸಲ್ಲಿಸಿದ್ದಾರೆ. ಈ ಮನವಿಯಲ್ಲಿ ಭೌಗೋಳಿಕವಾಗಿ ಮಧ್ಯ ಕರ್ನಾಟಕದ ಜನರಿಗೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಿಂದ ಆಗುವ ಅನುಕೂಲಗಳ ಬಗ್ಗೆ ರಾಜ್ಯಪಾಲರ ಗಮನ ಸೆಳೆದಿದ್ದಾರೆ.

ಶಿವಮೊಗ್ಗದಲ್ಲಿ ಸರ್ಕ್ಯೂಟ್ ಪೀಠ ಸ್ಥಾಪನೆಯಿಂದ ಶಿವಮೊಗ್ಗ ಜಿಲ್ಲೆಯ ಜನರಿಗೆ ಮಾತ್ರವಲ್ಲದೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳು ಸೇರಿದಂತೆ ಮಲೆನಾಡು ಮತ್ತು ಮಧ್ಯ ಕರ್ನಾಟಕ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ, ಇದರಿಂದಾಗಿ ನ್ಯಾಯಾಂಗಕ್ಕೆ ಸಂಬಂಧಿಸಿದ ಕೆಲಸಗಳು ಸುಲಭವಾಗಿ ಜನರಿಗೆ ಸಿಗಲಿದೆ ಎಂದು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ, ಶಿವಮೊಗ್ಗದಲ್ಲಿ ಪ್ರತ್ಯೇಕ ಸರ್ಕ್ಯೂಟ್ ಪೀಠವನ್ನು ಸ್ಥಾಪಿಸುವವರೆಗೆ ಶಿವಮೊಗ್ಗ ಜಿಲ್ಲೆ ಬೆಂಗಳೂರಿನ ಹೈಕೋರ್ಟ್‌ನ ಪ್ರಧಾನ ಪೀಠದ ವ್ಯಾಪ್ತಿಯಲ್ಲಿ ಮುಂದುವರಿಯಬೇಕು, ಬೆಂಗಳೂರು ಶಿವಮೊಗ್ಗದ ಜನರಿಗೆ ಅತ್ಯಂತ ಸುಲಭವಾಗಿ ತಲುಪಬಹುದಾದ ಕೇಂದ್ರ ಶಿವಮೊಗ್ಗವನ್ನು ಮಂಗಳೂರಿನಲ್ಲಿ ಪ್ರಸ್ತಾವಿತ ನ್ಯಾಯಪೀಠದ ವ್ಯಾಪ್ತಿಗೆ ತರುವುದರಿಂದ ಇನ್ನಷ್ಟು ಸಮಸ್ಯೆಗಳು ಆಗುವ ಸಾಧ್ಯತೆ ಇದೆ ಅಂತಾ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಇನ್ನೂ ಈ ಭೇಟಿಯ ಸಂದರ್ಭದಲ್ಲಿ ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ಅವರು ಉಪಸ್ಥಿತರಿದ್ದರು ಮತ್ತು ಸಂಸದರ ಬೇಡಿಕೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

“ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠದ ಸ್ಥಾಪನೆ ಈ ಭಾಗದ ಜನರ ನ್ಯಾಯಪ್ರಾಪ್ತಿಯ ಹಕ್ಕಿಗೆ ಗಮನಾರ್ಹ ಬಲ ನೀಡುತ್ತದೆ, ದಾವೆದಾರರ ವೆಚ್ಚದ ಹೊರೆಯನ್ನು ಕಡಿಮೆ ಮಾಡುತ್ತದೆ ಮತ್ತು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರ ದೀರ್ಘಕಾಲದ ಆಕಾಂಕ್ಷೆಯನ್ನು ಈಡೇರಿಸುತ್ತದೆ”

ಬಿ.ವೈ.ರಾಘವೇಂದ್ರ , ಸಂಸದ

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ