KARNATAKA NEWS/ ONLINE / Malenadu today/ Nov 3, 2023 SHIVAMOGGA NEWS
SHIVAMOGGA | ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ (by raghavendra ) ಮತ್ತೊಂದು ಅಪ್ಡೇಟ್ಸ್ ನೀಡಿದ್ದಾರೆ. ಸಿಗಂದೂರು ಸೇತುವೆ ಶೀಘ್ರವೇ ಪೂರ್ಣವಾಗಲಿದೆ ಎಂದವರು ತಿಳಿಸಿದ್ದಾರೆ. ಶಿವಮೊಗ್ಗ: ಸಿಗಂದೂರು ತುಮುರಿ ಸೇತುವೆಯ ವಿಳಂಬಕ್ಕೆ ಪ್ರತಿಕ್ರಿಯಿಸಿದ ಸಂಸದ ಬಿ.ವೈ. ರಾಘವೇಂದ್ರರವರು ಕೆಲವೊಂದು ತಾಂತ್ರಿಕ ತೊಂದರೆಗಳಿಂದ ಎರಡು ತಿಂಗಳು ಎಳಂಬವಾಗುವುದು ನಿಜ.
ಆದರೆ, ಪ್ರಕೃತಿಯ ಮತ್ತು ಹವಾಮಾನದ ವೈಪರಿತ್ಯದಿಂದಾಗಿ ಮಳೆ ಹೆಚ್ಚಿದ್ದರೂ, ಕಡಿಮೆ ಇದ್ದರೂ ಆ ಪ್ರದೇಶದಲ್ಲಿ ಕಾಮಗಾರಿ ಸ್ವಲ್ಪ ಕಠಿಣವಾಗಿರುವುದರಿಂದ ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸಲು ಆಗಿಲ್ಲ, ಲೋಕಸಭಾ ಚುನಾವಣೆಯ ಒಳಗೆ ಈ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಚಿವ ನಿತಿನ್ ಗಡ್ಕರಿ ರವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ಆರ್. ಹೇಳಿದ್ದಾರೆ.
ಇದೇ ವೇಳೇ ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಶತಮಾನೋತ್ಸವ ವಿಚಾರದ ಬಗ್ಗೆ ಮಾತನಾಡಿದ ಅವರು, ಭದ್ರಾವತಿಯ ಕಾರ್ಖಾನೆ ಆವರಣದಲ್ಲಿ ನ.4-5 ರಂದು ಕಾರ್ಯಕ್ರಮ ಆಯೋಜನೆಗೊಂಡಿದೆ. ಶತಮಾನೋತ್ಸವ ಕಂಡ ಕಾರ್ಖಾನೆಯ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ವಿವಿಧ ಮಠಾಧೀಶರು ಬರಲಿದ್ದಾರೆ ಎಂದು ತಿಳಿಸಿದರು. ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ನಡೆದಿದೆ ಈ ವೇಳೇ ತಿಳಿಸಿದರು
