SHIVAMOGGA | Jan 7, 2024 | ಶಿವಮೊಗ್ಗದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು, ಸಾರ್ವಜನಿಕರಿಗೆ ಲಭ್ಯತೆ ಕುರಿತು ಸಂಸದರು ಪೂರ್ವಭಾವಿ ಪರಿಶೀಲನೆ ನಡೆಸಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರರವರ ಜೊತೆ ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು
ಅಂದಾಜು 140 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪೈಕಿ ಈಗಾಗಲೇ ಸೋಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಗಿದಿದೆ, ಪಿಎನ್ಟಿ ಕಾಲೋನಿ ಬಳಿ ಅಂಡರ್ ಪಾಸ್ ಕಾಮಗಾರಿ ಮುಗಿದಿದೆ.
ಸವಳಂಗ ರಸ್ತೆಯ ಎಲ್‌ಸಿ-49ರಲ್ಲಿ ₹39 ಕೋಟಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅಂತಿಮ ಹಂತದಲ್ಲಿದೆ.
ವಿದ್ಯಾನಗರದ ರೈಲ್ವೆ ಮೇಲ್ಸೇತುವೆ ಪೂರ್ಣ ಹಂತಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಸಂಸದರು ಪರಿಶೀಲನೆ ನಡೆಸಿದ್ದಾರೆ.