SHIVAMOGGA NEWS TODAY

ಶಿವಮೊಗ್ಗದ ಬಹುಮಹಡಿ ವಾಹನ ನಿಲ್ದಾಣ ಓಪನ್​ಗೆ ಮುಹೂರ್ತ ಫಿಕ್ಸ್​ : ಯಾವಾಗ ಓಪನ್​

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Multi level Parking : ಶಿವಮೊಗ್ಗದ ಬಹುಮಹಡಿ ವಾಹನ ನಿಲ್ದಾಣ ಓಪನ್​ಗೆ ಮುಹೂರ್ತ ಫಿಕ್ಸ್​ : ಯಾವಾಗ ಓಪನ್​

Multi level Parking :  ಶಿವಮೊಗ್ಗ: ನಗರದ ಶಿವಪ್ಪನಾಯಕ ಪ್ರತಿಮೆ ವೃತ್ತದ ಬಳಿ, ಹಳೇ ಎಸ್.ಎನ್. ಮಾರ್ಕೆಟ್ ಸಮೀಪ ನಿರ್ಮಿಸಲಾಗಿರುವ ಬಹುಮಹಡಿ ವಾಹನ ನಿಲ್ದಾಣದ ಶುಭಾರಂಭಕ್ಕೆ ಕಡೆಗೂ ದಿನಾಂಕ ನಿಗದಿಯಾಗಿದೆ. ಇದೇ ಆಗಸ್ಟ್ 1 ರಂದು ಬೆಳಿಗ್ಗೆ 11 ಗಂಟೆಗೆ ಈ ಬಹುನಿರೀಕ್ಷಿತ ಪಾರ್ಕಿಂಗ್ ಕಟ್ಟಡ ಉದ್ಘಾಟನೆಗೊಳ್ಳಲಿದೆ.

ಬಹುಮಹಡಿ ಕಟ್ಟಡ ನಿರ್ಮಾಣಗೊಂಡು ವರ್ಷಗಳೇ ಕಳೆದಿದ್ದರೂ, ಅದರ ಉದ್ಘಾಟನೆ ಯಾವಾಗ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿತ್ತು. ನಗರದಲ್ಲಿ ವಾಹನ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಟ್ಟಡದ ಕಾರ್ಯಾಚರಣೆಗೆ ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದರು.

ಕಳೆದ ಆರು ತಿಂಗಳ ಹಿಂದಷ್ಟೇ ಈ ಬಹುಮಹಡಿ ಕಟ್ಟಡವು ಸ್ಮಾರ್ಟ್ ಸಿಟಿಯಿಂದ ನಗರ ಪಾಲಿಕೆಗೆ ಹಸ್ತಾಂತರಗೊಂಡಿತ್ತು. ಅದರ ನಂತರ, ಪಾರ್ಕಿಂಗ್ ನಿರ್ವಹಣೆಯ ಟೆಂಡರ್ ಪ್ರಕ್ರಿಯೆ ನಡೆಯಿತು. ಇದೀಗ, ಶಿವಮೊಗ್ಗದವರಿಗೆ ಈ ಪಾರ್ಕಿಂಗ್ ಟೆಂಡರ್ ಆಗಿದ್ದು, ಆಗಸ್ಟ್ 1 ರಿಂದ ಅಧಿಕೃತವಾಗಿ ಪಾರ್ಕಿಂಗ್ ವ್ಯವಸ್ಥೆ ಶುಭಾರಂಭಗೊಳ್ಳಲಿದೆ.

Multi level Parking

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.