ಆನಂದಪುರ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಂಟೇನರ್ ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ

Mumbaal Road accident: ಆನಂದಪುರ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಂಟೇನರ್ ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ

Mumbaal Road accident ಆನಂದಪುರ: ಆನಂದಪುರ ಸಮೀಪದ ಮುಂಬಾಲ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಅಪಘಾತದ ತೀವ್ರತೆಗೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪಘಾತದ ವಿಷಯ ತಿಳಿದ ಕೂಡಲೇ ಆನಂದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Mumbaal Road accident ಬಸ್ ಹಾಗೂ ಲಾರಿ ನಡುವೆ ಅಪಘಾತ

    Mumbaal Road accident ಬಸ್ ಹಾಗೂ ಲಾರಿ ನಡುವೆ ಅಪಘಾತ

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು