mungaru male rain alert ಶಿವಮೊಗ್ಗವೂ ಸೇರಿದಂತೆ ರಾಜ್ಯ ಹಲವೆಡೆ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆ ಬೆಂಗಳೂರು ಇದರ ಡೈಲಿ ಬುಲೆಟಿನ್ ಪ್ರಕಾರ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (೩೦-೪೦ kmph) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (೩೦-೪೦ kmph) ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರುತ್ತದೆ.
ಇನ್ನೂ ನಾಳೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (೩೦-೪೦ kmph) ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ., ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರುವ ಸಾಧ್ಯತೆ ಇದೆ.
ನಾಡಿದ್ದು ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿಯೊಂದಿಗೆ (೩೦-೪೦ kmph) ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Karnataka State Natural Disaster Monitoring Centre @KarnatakaSNDMC ನಪ್ರಕಾರ, ಮುಂದಿನ 7 ದಿನಗಳ ಕಾಲ mungaru male rain alert
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಇನ್ನೂ ಇವತ್ತು ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

#ಎಚ್ಚರಿಕೆವಹಿಸಿ #ಸುರಕ್ಷಿತವಾಗಿರಿ #ಮುಂಗಾರುಮಳೆ #KSNDMC