ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 23 2025 : ನೈರುತ್ಯ ರೈಲ್ವೆ ಇಲಾಖೆ ಮಹತ್ವದ ಪ್ರಕಟಣೆಯೊಂದನ್ನ ನೀಡಿದ್ದು, ಈ ಪ್ರಕಟಣೆಯಿಂದಾಗಿ ಮೈಸೂರು ಮತ್ತು ಶಿವಮೊಗ್ಗ ನಡುವಿನ ರೈಲು ಪ್ರಯಾಣಿಕರಿಗೆ ಅನುಕೂಲವಾಗಲಿದೆ
ಇವತ್ತು ಅಂದರೆ ಸೆಪ್ಟೆಂಬರ್ 23 ಮತ್ತು 24 ರಂದು, ಮೈಸೂರಿನಿಂದ ಶಿವಮೊಗ್ಗಕ್ಕೆ ಹೊರಡುವ 16225 ಸಂಖ್ಯೆಯ ಮೈಸೂರು ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ನಿಗದಿತ ಸಮಯಕ್ಕಿಂತ ತಡವಾಗಿ ಓಡಲಿದೆ ಎಂದು ನೈಋತ್ಯ ರೈಲ್ವೆ ಇಲಾಖೆ ಘೋಷಿಸಿದೆ. ಮಂದಗೆರೆ ರೈಲ್ವೆ ಯಾರ್ಡ್‌ನಲ್ಲಿ ಅಗತ್ಯ ಸುರಕ್ಷತಾ ಕಾಮಗಾರಿಗಳು ನಡೆಯುತ್ತಿರುವ ಕಾರಣ ಈ ಬದಲಾವಣೆ ಮಾಡಲಾಗಿದ್ದು, ರೈಲು ಸುಮಾರು 100 ನಿಮಿಷಗಳಷ್ಟು ವಿಳಂಬವಾಗಿ ಸಂಚರಿಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಅಂದರೆ,ಈ ರೈಲು ತನ್ನ ಗಮ್ಯಸ್ಥಾನವನ್ನು ತಲುಪಲು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ವಿಳಂಬವಾಗಬಹುದು ಎಂದು ಇಲಾಖೆ ತಿಳಿಸಿದೆ.
Mysore-Shivamogga Train Delayed for Two Days
ರೈಲು, ರೈಲು ಸೇವೆ, ಮೈಸೂರು-ಶಿವಮೊಗ್ಗ ರೈಲು, ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು, ದಸರಾ ವಿಶೇಷ ರೈಲು, ಹಬ್ಬದ ರೈಲು, ರೈಲ್ವೆ ಇಲಾಖೆ, Train, Indian Railways, Mysore-Shivamogga train, Hubballi-Kollam special train, Dussehra special train, Sabarimala special train, SWRailway
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!