nagara hobli incident news
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಗರ ಹೋಬಳಿಯ ಶಾಂತಿಕೆರೆ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಕೆಲಕಾಲ ಟ್ರಾಪಿಕ್ ಜಾಮ್ ಆಗಿತ್ತು. ಇಲ್ಲಿನ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ 766 ಸಿ ಮಾರ್ಗದಲ್ಲಿ ಘಟನೆ ನಡೆದಿದೆ. ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡಿದ್ದರು. ಇವರು ಕಾರಗಡಿಯಿಂದ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಆದರೆ ಶಾಂತಿಕೆರೆ ಬಳಿ ಕುಂದಾಪುರದಿಂದ ಬರುತ್ತಿದ್ದ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಕಿತ್ಸೆ ಒದಗಿಸಲಾಗಿದೆ. ಇನ್ನು ಘಟನೆಯಿಂದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಬಂಧ ನಗರ ಪೊಲೀಸ್ ಠಾಣೆ ಪೊಲೀಸರು ಸ್ಥಳದಲ್ಲಿದ್ದ ವಾಹನಗಳನ್ನು ತೆರವುಗೊಳಿಸಿದರು.
