ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ

National Highway 169 A tree on fire in the morning! What is the event?ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ

ರಾಷ್ಟ್ರೀಯ ಹೆದ್ದಾರಿ 169 A  ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ

KARNATAKA NEWS/ ONLINE / Malenadu today/ Sep 30, 2023 SHIVAMOGGA NEWS’ 



ಶಿವಮೊಗ್ಗ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 169 ಎ (National Highway 169 A) ನಲ್ಲಿ ಇದ್ದಕ್ಕಿದಂತೆ ಮರವೊಂದು ಹೊತ್ತಿಕೊಂಡು ಉರಿದಿದೆ. ಇಡೀ ಮರವೂ ಬೆಂಕಿಯಿಂದ ಕೆಂಡದುಂಡೆಯಂತೆ ಧಗಧಗಿಸುವ ದೃಶ್ಯವು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. 

ತೀರ್ಥಹಳ್ಳಿ ತಾಲ್ಲೂಕು ತೂದೂರು ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ರಸ್ತೆ ಬದಿಯಲ್ಲಿ ಹುಣಸೆ ಮರವೊಂದು ಒಣಗಿತ್ತು. ಅದಕ್ಕೆ ನಿನ್ನೆ ಹೈವೋಲ್ಟೆಜ್ ವಿದ್ಯುತ್ ತಂತಿ ತಗುಲಿ ಸ್ಪಾರ್ಕ್​ ಆಗಿದೆ. ಪರಿಣಾಮ ಮರಕ್ಕೆ ಬೆಂಕಿ ಹಿಡಿದಿದೆ. ಬಳಿಕ ಇಡೀ ಮರ ಸುಡಲು ಆರಂಭಿಸಿದೆ. ಬೀಸುತ್ತಿದ್ದ ಗಾಳಿ ಬೆಂಕಿ ಕಿಡಿ ಹಾರುತ್ತಿದ್ದ ದೃಶ್ಯ ಕತ್ತಲಲ್ಲಿ ಓಕುಳಿ ಹಾರಿದಂತೆ ಕಾಣುತ್ತಿತ್ತು. 

ಬೆಳಗಿನ ಜಾವ  ನಾಲ್ಕು ಗಂಟೆ ಸುಮಾರಿಗೆ ಘಟನೆ ಸಂಭವಿಸಿದ್ದು, ಸಂಚಾರಕ್ಕೂ ಸಹ ಸ್ವಲ್ಪ ಸಮಸ್ಯೆಯಾಗಿತ್ತು. ಅದೇ ಮಾರ್ಗವಾಗಿ ಹೋಗುತ್ತಿದ್ದವರು ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕೆಲವೇ ನಿಮಿಷದಲ್ಲಿ ಬೆಂಕಿ ನಂದಿಸಿದ್ದಾರೆ.  


ಇನ್ನಷ್ಟು ಸುದ್ದಿಗಳು 

  1. BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

  2. ಲೋಡ್ ಗಾಡಿಯಿಂದ ಬಿದ್ದ ಮರದ ತುಂಡು ಬಡಿದು ಬೈಕ್​ ಸವಾರನ ಸ್ಥಿತಿ ಗಂಭೀರ! ಹೀಗೂ ಆಗುತ್ತೆ ಹುಷಾರು ತಪ್ಪದಿರಿ ವಾಹನ ಸವಾರರೇ?

  3. ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?