SHIVAMOGGA NEWS TODAY

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಸಚಿವ ಧರ್ಮೇಂದ್ರ ಪ್ರಧಾನ್ ಅಣುಕು ಶವಯಾತ್ರೆ, ಭಾವಚಿತ್ರ ದಹನ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನೀಟ್​​ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಮರು ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್​ ವತಿಯಿಂದ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ : ಆನ್‌ಲೈನ್ ಟ್ರೇಡಿಂಗ್ ಆಮಿಷಕ್ಕೆ ಒಳಗಾಗಿ 39 ಲಕ್ಷ ಕಳೆದುಕೊಂಡ ಉದ್ಯಮಿ

ಶಿವಮೊಗ್ಗ ಬ್ರೇಕಿಂಗ್: ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ: ದಾಖಲೆಗಳ ಪರಿಶೀಲನೆ

ಗೋಪಿ ಸರ್ಕಲ್​ನಲ್ಲಿ ನಡೆದಈ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ರವರ ಅಣುಕು ಶವಯಾತ್ರೆಯನ್ನು ನಡೆಸಿದರು. ಶಿವಮೊಗ್ಗ ಕಾಂಗ್ರೆಸ್​ ಜಿಲ್ಲಾ ಕಚೇರಿಯಿಂದ ಆರಂಭವಾದ ಅಣುಕು ಪ್ರದರ್ಶನವು ಗೋಪಿ ಸರ್ಕಲ್​​ನವರೆಗೂ ನಡೆಯಿತು. ಈ ವೇಳೆ, ಸಮರ್ಥವಾಗಿ ಪರೀಕ್ಷೆ ನಡೆಸದ ಶಿಕ್ಷಣ ಸಚಿವರು ಇದ್ದೂ ಸತ್ತಂತೆ ಎಂದು ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ನಡೆದ 21 ವಿದ್ಯಾರ್ಥಿಗಳ ಆತ್ಮಹತ್ಯೆಗೆ ಸಚಿವರೇ ಕಾರಣ ಎಂದು ಘೋಷಣೆಗಳನ್ನು ಕೂಗಿದರು. ನಂತರ ಧರ್ಮೇಂದ್ರ ಪ್ರಧಾನ್​ರವರ ಭಾವಚಿತ್ರವನ್ನು ಸುಡಲಾಯಿತು. 

ಅಲ್ಲದೆ, ಕೇಂದ್ರ ಸರ್ಕಾರವು ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಾಂತ್ವನ ಹೇಳುವುದರ ಜೊತೆಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಇದರೊಂದಿಗೆ, ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯ ಬದಲಾಗಿ ರಾಜ್ಯಮಟ್ಟದಲ್ಲೇ ಸಿಇಟಿ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸಿತು.

ಈ ಸಂದರ್ಭದಲ್ಲಿ ಯುವ ಮುಖಂಡ ಮಧುಸೂದನ್, ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ  ಗಿರೀಶ್, ಮಹಮದ್ ಗೌಸ್, ಪ್ರಧಾನ ಕಾರ್ಯದರ್ಶಿಗಳಾದ  ಅಬ್ದುಲ್, ಮಲಗೊಪ್ಪ ಶಿವು, ರೇಷ್ಮಾ,ಗೌತಮ್, ಬಾಬು, ತೌಫಿಕ್, ನಿಖಿಲ್, ವಿಷ್ಣು, ಆಕಾಶ್, ಅಶೋಕ್, ಲಿಂಗರಾಜು, ರವಿ, ಯೋಗೇಶ್,ಅರುಣ್, ಪ್ರಶಾಂತ್, ಗೌತಮ್, ದೃಶ್ಯ, ರೋಷನ್, ಅನೂಪ್, ಮನು, ಗಣೇಶ್, ಗಗನ್ ಹಾಗೂ ನೂರಾರು ಯುವಕ ಮುಖಂಡರು ಪಾಲ್ಗೊಂಡಿದ್ದರು.

NEET Row Youth Congress Protests in Shivamogga

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.