ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ; ಸಹಾಯವಾಣಿ ಸಂಖ್ಯೆ ಪ್ರಕಟ

ಹಂಚಿಕೊಳ್ಳಿ
WhatsApp Facebook X Telegram
Nepal Floods
Nepal Floods

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ ನಾಗರಿಕರು ಯಾರಾದರೂ ನಾಪತ್ತೆಯಾಗಿದ್ದರೆ ಅಥವಾ ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ, ತಕ್ಷಣವೇ ಅವರ ವಿವರಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರವು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

​ಕೇಂದ್ರ ಗೃಹ ಸಚಿವಾಲಯ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ರಾಜ್ಯ ಸರ್ಕಾರವು ಸತತ ಸಂಪರ್ಕದಲ್ಲಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲು ಮತ್ತು ನಾಪತ್ತೆಯಾದವರನ್ನು ಪತ್ತೆಹಚ್ಚಲು ಸಮರಪಾದಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದೆ.

​ನೇಪಾಳದಲ್ಲಿ ನಿಮ್ಮ ಕುಟುಂಬಸ್ಥರು, ಸ್ನೇಹಿತರು ಅಥವಾ ಪರಿಚಿತರು ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಸಾರ್ವಜನಿಕರು ನಾಪತ್ತೆಯಾದ ವ್ಯಕ್ತಿಯ ಪೂರ್ಣ ಹೆಸರು, ಮೊಬೈಲ್ ಸಂಖ್ಯೆ, ಕೊನೆಯದಾಗಿ ಸಂಪರ್ಕಿಸಿದ ಸ್ಥಳ ಮತ್ತು ಸಮಯ ಹಾಗೂ ಖಾಯಂ ವಿಳಾಸದ ವಿವರಗಳನ್ನು ಸರ್ಕಾರಕ್ಕೆ ತಕ್ಷಣವೇ ಒದಗಿಸಲು ಕೋರಲಾಗಿದೆ.

​ಈ ವಿವರಗಳನ್ನು ನಮೂದಿಸಲು ರಾಜ್ಯ ಸರ್ಕಾರವು ವಿಶೇಷ ಗೂಗಲ್ ಫಾರ್ಮ್ (docs.google.com/forms/d/1gnw8B…) ಲಿಂಕ್ ಅನ್ನು ಸಹ ಒದಗಿಸಿದೆ.

​ಸಂತ್ರಸ್ತರು ಮತ್ತು ಅವರ ಕುಟುಂಬಸ್ಥರ ನೆರವಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) 24×7 ಸಹಾಯವಾಣಿ ತೆರೆದಿದ್ದು, ಸಾರ್ವಜನಿಕರು 1070 (ಟೋಲ್ ಫ್ರೀ) ಅಥವಾ 080-22253707 ಸಂಖ್ಯೆಗೆ ಕರೆ ಮಾಡಬಹುದು. ಇಮೇಲ್ ಮೂಲಕ ಮಾಹಿತಿ ನೀಡಲು [email protected] ವಿಳಾಸಕ್ಕೆ ಕಳುಹಿಸಬಹುದಾಗಿದೆ.

​ಅಲ್ಲದೆ, ನೇಪಾಳದಲ್ಲಿ ಸಿಲುಕಿರುವ ಭಾರತೀಯರಿಗೆ ತುರ್ತು ನೆರವು ನೀಡಲು ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ತುರ್ತು ವಾಟ್ಸಾಪ್ ಹಾಗೂ ಕರೆ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು +977 9851316807, +977 9709107500 ಅಥವಾ +977 9810326117 ಸಂಖ್ಯೆಗಳನ್ನು ನೇರವಾಗಿ ಅಥವಾ ವಾಟ್ಸಾಪ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲು ಹಾಗೂ ನೆರವು ಕೋರಲು  ಪ್ರಕಟಣೆಯಲ್ಲಿ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor