SHIVAMOGGA NEWS TODAY

ಶಿವಮೊಗ್ಗ: ಪೊಲೀಸರಿಗೆ ನೂತನ ಬ್ಲೂ ಪಿ-ಕ್ಯಾಪ್ ವಿತರಣೆ, ವಿಡಿಯೋ ನೋಡಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಹೊಸ ವಿನ್ಯಾಸದ ಟೋಪಿಗಳನ್ನು ನೀಡಲಾಗಿದೆ. ನಗರದ ಡಿಎಆರ್ (DAR) ಪೊಲೀಸ್ ಕವಾಯತು ಮೈದಾನದಲ್ಲಿ ಇಂದು ಬೆಳಿಗ್ಗೆ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲೆಯ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ನೂತನ ‘ಬ್ಲೂ ಪಿ-ಕ್ಯಾಪ್’ಗಳನ್ನು ವಿತರಿಸಲಾಯಿತು. 

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ, ಐಪಿಎಸ್ ರವರು ಈ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಿಸ್ತಂತು ಘಟಕ (Wireless Unit) ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಈ ನೂತನ ಕ್ಯಾಪ್‌ಗಳನ್ನು ಹಸ್ತಾಂತರಿಸಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಾದ ಕಾರಿಯಪ್ಪ ಎ. ಜಿ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1) ಹಾಗೂ ರಮೇಶ್ ಕುಮಾರ್ ಎಸ್ (ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2) ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

New Blue P Caps for Shivamogga Police Staff

Malenadu Today Shivamogga

New Blue P Caps

shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.