ಶಿವಮೊಗ್ಗ ಆಡಳಿತದಲ್ಲಿ ಮೇಜರ್ ಬದಲಾವಣೆ! ಜಿಲ್ಲೆಗೆ ಹೊಸ ಡಿಸಿ ಎಂಟ್ರಿ! ಗುರುದತ್​ ಹೆಗೆಡೆ ವರ್ಗಾವಣೆ

New DC Appointed for Shivamogga  ಶಿವಮೊಗ್ಗ : ಎಸ್​ಪಿ ಮಿಥುನ್ ಕುಮಾರ್ ವರ್ಗಾವಣೆ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆಯ ಸುದ್ದಿಯೊಂದು ಹೊರಬಿದ್ದಿದೆ ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಎಸ್​​ಪಿ ಮಿಥುನ್ ಕುಮಾರ್ ಟ್ರಾನ್ಸ್​ಫರ್​, ನಿಖಿಲ್​ ಬಿ ನೂತನ ಎಸ್​ಪಿ! ಇನ್ನಷ್ಟು ವಿಷಯಗಳಿವೆ! ಓದಿ

ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ  ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. 

ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಪ್ರಭುಲಿಂಗ ಕವಲಿಕಟ್ಟಿ ಅವರು ನಿಯೋಜನೆಗೊಂಡಿದ್ದಾರೆ. ಮುಂದಿನ ಆದೇಶದವರೆಗೆ ಅವರು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. 

New DC Appointed for Shivamogga
New DC Appointed for Shivamogga

ಸಾಲು ಸಾಲು ರಜೆಗೆ ಶಿವಮೊಗ್ಗ ಜಿಲ್ಲೆ ಹೌಸ್‌ಫುಲ್

 ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿರುವ 2013 ರ ಬ್ಯಾಚ್‌ನ ಕರ್ನಾಟಕ ಕೆಡರ್‌ನ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ  ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ.

ಅಡಿಕೆ ಬೆಳೆಗಾರರ ಗಮನಕ್ಕೆ ! ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ! ಉಳಿದೆಡೆ ಎಷ್ಟಿದೆ ಓದಿ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ಶಿವಮೊಗ್ಗಕ್ಕೆ ಹೊಸ ಡಿಸಿ ಮತ್ತು ಎಸ್ಪಿ ನೇಮಕ | ಪ್ರಭುಲಿಂಗ ಕವಲಿಕಟ್ಟಿ ಹಾಗೂ ನಿಖಿಲ್ ಬಿ ಅಧಿಕಾರ ಸ್ವೀಕಾರ ,New DC and SP Appointed for Shivamogga | Prabhuling Kavalikatti and Nikhil B to Take Charge, New DC Appointed for Shivamogga
New DC Appointed for Shivamogga
New DC Appointed for Shivamogga