SHIVAMOGGA | MALENADUTODAY NEWS | ಮಲೆನಾಡು ಟುಡೆ Dec 27, 2024
ಶಿವಮೊಗ್ಗದಲ್ಲಿಯು ಹೊಸ ವರ್ಷ ಆಚರಣೆಗೆ ಪೊಲೀಸ್ ಇಲಾಖೆ ಕೆಲವೊಂದು ಷರತ್ತುಗಳನ್ನ ವಿಧಿಸುತ್ತಿದೆ. ಈ ಸಂಬಂಧ ನಿನ್ನೆ ದಿನ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್ ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ನಡೆಸಿದರು. ಈ ವೇಳೆ 2025 ರ ಹೊಸವರ್ಷ ಆಚರಣೆ ಸಂಬಂಧ ಮಹತ್ವದ ಸೂಚನೆಗಳನ್ನ ನೀಡಿದ್ದಾರೆ.
1) ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ, ಸರಹದ್ದಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವುದು.
2) ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ / ಅನುಮತಿ ಪಡೆಯದೇ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
4) ಕಾರ್ಯಕ್ರಮ ಆಯೋಜಿಸುವವರು ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡುವುದು ಹಾಗೂ ಆಯೋಜಿಸಲಾಗುವ ಕಾರ್ಯಕ್ರಮಕ್ಕೆ ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದು.
5) ಕಾರ್ಯಕ್ರಮದ ಆಯೋಜಕರು ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ ಇದ್ದಲ್ಲಿ, ಅಬಕಾರಿ ಇಲಾಖೆಯ ಷರತ್ತುಗಳು ಹಾಗೂ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವುದು
6)ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ ಚಾಲಕರ ಏರ್ಪಾಡು ಮಾಡಿ ಕಳುಹಿಸಿಕೊಡುವುದು ಅಥವಾ ಅಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದು.
7) ಹೊಸ ವರ್ಷದ ಆಚರಣೆಯನ್ನು ಮಧ್ಯ ರಾತ್ರಿ 12:00 ಗಂಟೆಗೆ ಆಚರಿಸಿದ ನಂತರ ರಾತ್ರಿ 01:00 ಗಂಟೆಯ ಒಳಗಾಗಿ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮಗಳನ್ನು ಮುಕ್ತಾಯ ಮಾಡುವುದು.
8) ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸೂಕ್ತ ಮತ್ತು ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು
9) 200 ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿ ಟಿವಿ ಗಳನ್ನು ಅಳವಡಿಸುವುದು ಮತ್ತು ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ / ಅತಿಥಿಗಳ ಹೆಸರು ಮತ್ತು ವಿವರವನ್ನು ಬರೆದುಕೊಂಡು, ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳತಕ್ಕದ್ದು.
10) ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ ದ್ವಾರದಲ್ಲಿ ತಮ್ಮ ಸಿಬ್ಬಂಧಿಗಳನ್ನು ನೇಮಿಸಿಕೊಂಡು, ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾವಹಿಸುವುದು.
11) ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಿ, ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಎಚ್ಚರದಿಂದಿರುವುದು. ಯಾವುದೇ ಸಣ್ಣ ಪುಟ್ಟ ಘಟನೆಗಳು ಜರುಗಿದಾಗ, ಯಾವುದೇ ನಿರ್ಲಕ್ಷತನ ತೋರದೇ ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡುವುದು.
12) ಕಾರ್ಯಕ್ರಮದಲ್ಲಿ ಅಳವಡಿಸುವ ದ್ವನಿ ವರ್ದಕ, ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ / ತೊಂದರೆಯಾಗದ ರೀತಿ ನೋಡಿಕೊಳ್ಳುವುದು
13) ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ ಈಜುಕೊಳ ( ಸ್ವಿಮ್ಮಿಂಗ್ ಫೂಲ್ ) ಇದ್ದಲ್ಲಿ, ಹೆಚ್ಚಿನ ಗಮನ ಹರಿಸುವುದು ಹಾಗೂ ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಿಕೊಂಡು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು.
SUMMARY | Shivamogga SP Mithun Kumar has imposed certain conditions regarding the 2025 New Year celebrations. He held a meeting of the owners and managers of all homestays, hotels, lodges, and resorts in Shivamogga district. During this, he gave important instructions regarding the 2025 New Year celebrations.
KEY WORDS | Shivamogga SP Mithun Kumar imposed conditions to New Year celebrations, conditions to New Year celebrations in shivamogga, owners and managers homestays, hotels, lodges, resorts in Shivamogga district, 2025 New Year celebrations