INFORMATION NEWS

ಮಲೆನಾಡು ಜನತೆಗೆ ಸಿಹಿಸುದ್ದಿ: ಮಂಗನ ಕಾಯಿಲೆಗೆ ಕುರಿತು ಆರೋಗ್ಯ ಸಚಿವರಿಂದ ಗುಡ್ ನ್ಯೂಸ್​

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಮಲೆನಾಡಿಗರ ಜ್ವಲಂತ ಸಮಸ್ಯೆಗೊಂದು ಸದ್ಯದಲ್ಲಿಯೇ ವ್ಯಾಕ್ಸಿನ್​ ಸಿಗುವ ಸಾಧ್ಯತೆ ಇದೆ. ಹೌದು, ಮಂಗನ ಕಾಯಿಲೆಗೆ ಅಥವಾ ಕೆಎಫ್‌ಡಿ ಎಂದು ಕರೆಯಲ್ಪಡುವ ಕಾಯಿಲೆಗೆ ನೂತನ ಲಸಿಕೆ ಸಿದ್ಧಗೊಂಡಿದ್ದು, ಪ್ರಸ್ತುತ ಕ್ಲಿನಿಕಲ್ ಟ್ರಯಲ್ ಹಂತದಲ್ಲಿದೆ. ಪ್ರಸಕ್ತ ವರ್ಷದ ಅಂತ್ಯದ ವೇಳೆಗೆ ಈ ಲಸಿಕೆಯು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

Health Minister Dinesh Gundu Rao announce in the Vidhana Sabha that a newly developed Monkey Fever vaccine will be available by the end of this year
Health Minister Dinesh Gundu Rao announce in the Vidhana Sabha that a newly developed Monkey Fever vaccine will be available by the end of this year

ಸದನದಲ್ಲಿ ಈ ಬಗ್ಗೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಪ್ರಸ್ತುತ ಬಳಕೆಯಲ್ಲಿರುವ ಚುಚ್ಚುಮದ್ದು ಅಷ್ಟಾಗಿ ಪರಿಣಾಮಕಾರಿಯಾಗಿಲ್ಲ ಎಂಬ ವರದಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥರನ್ನು ಭೇಟಿಯಾಗಿ ಹೊಸ ಲಸಿಕೆಗಾಗಿ ಮನವಿ ಸಲ್ಲಿಸಿದ್ದಾಗಿ ಅವರು ವಿವರಿಸಿದರು.

ಶಿವಮೊಗ್ಗ: ಭದ್ರಾ ಚಾನೆಲ್‌ನಲ್ಲಿ ಈಜಲು ಹೋದ 13 ವರ್ಷದ ಬಾಲಕ ನೀರುಪಾಲು 

ಇದೀಗ ಇಂಡಿಯನ್ ನ್ಯೂರಾಲಾಜಿಕಲ್ ಸಂಸ್ಥೆಯ ತಜ್ಞರು ನೂತನ ಲಸಿಕೆಯನ್ನು ಶೋಧಿಸಿದ್ದು, ಇದರ ಪ್ರಾಯೋಗಿಕ ಪರೀಕ್ಷೆಗಳು ಪ್ರಗತಿಯಲ್ಲಿವೆ. ಈ ಲಸಿಕೆಯು ಬಹುತೇಕ ಯಶಸ್ವಿಯಾದ ಹಿನ್ನೆಲೆಯಲ್ಲಿ, ಈ ವರ್ಷದ ಕೊನೆಯ ಭಾಗದಲ್ಲಿ ಜನಸಾಮಾನ್ಯರಿಗೆ ವಿತರಿಸಲು ಲಭ್ಯವಾಗಲಿದೆ. ಆದುದರಿಂದ ಮಲೆನಾಡು ಭಾಗದ ನಾಗರಿಕರು ಈ ಕಾಯಿಲೆಯ ಬಗ್ಗೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Health Minister Dinesh Gundu Rao announce in the Vidhana Sabha that a newly developed Monkey Fever vaccine will be available by the end of this year
Health Minister Dinesh Gundu Rao announce in the Vidhana Sabha that a newly developed Monkey Fever vaccine will be available by the end of this year

ಶಿವಮೊಗ್ಗ: ಮನೆಗೆ ಕ್ಯೂರಿಂಗ್ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾರೆ ಮೇಸ್ತ್ರಿ ಸಾವು

Health Minister Dinesh Gundu Rao announce in the Vidhana Sabha that a newly developed Monkey Fever vaccine will be available by the end of this year
END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ