ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್ ನ್ಯೂಸ್ ಇಲ್ಲಿದೆ.
ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today
ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. ಇದೀಗ ಆರೋಪಿಗಳನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಬೈಕ್ ತಡೆದು ಬುದ್ದಿವಾದ ಹೇಳಿದ್ದಕ್ಕೆ ಹಲ್ಲೆ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಜಯನಗರದಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸುತ್ತಿದ್ದವರನ್ನ ಪ್ರಶ್ನಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.ಉದ್ದೇಶಪೂರ್ವಕವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಹಲ್ಲೆಗೊಳಗಾದ ಯುವಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದೆ.
ಕರೆಂಟ್ ಕಂಬಕ್ಕೆ ಕಾರು ಡಿಕ್ಕಿ
ತೀರ್ಥಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. 112 ಸಿಬ್ಬಂದಿ ಸ್ಥಳಕ್ಕೆ ತೆರಳಿ ಘಟನೆ ಸಂಬಂಧ ಪರಿಶೀಲನೆ ನಡೆಸಿದೆ.
ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿಗೆ ತಕ್ಷಣ ನೆರವು
ಮಾಳೂರು ಪೊಲೀಸ್ ಠಾಣೆಯ ಲಿಮಿಟ್ಸ್ನಲ್ಲಿ ಅಚಾನಕ್ ಆಗಿ ಎದೆನೋವು ಕಾಣಿಸಿಕೊಂಡು ನರಳಾಡುತ್ತಿದ್ದ ವ್ಯಕ್ತಿಯನ್ನು 112 ಪೊಲೀಸರು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಸ್ಥಳೀಯರು ಈ ಬಗ್ಗೆ 112 ಗೆ ಕರೆ ಮಾಡಿದ್ದರು. ಸ್ಥಳಕ್ಕೆ ತೆರಳಿದ ಪೊಲೀಸರಿಗೆ ಅನಾರೋಗ್ಯ ಪೀಡಿತ ವ್ಯಕ್ತಿಗೆ ಎದೆನೋವು ಕಾಣಿಸಿಕೊಂಡಿದದೆ ಎಂದು ಗೊತ್ತಾಗಿದೆ ತಕ್ಷಣವೇ ಸ್ಥಳಕ್ಕೆ ಆಂಬುಲೆನ್ಸ್ ತರಿಸಿಕೊಂಡು ಅನಾರೋಗ್ಯ ಪೀಡಿತರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.
ಹೊಸಮನೆ ಠಾಣಾ ವ್ಯಾಪ್ತಿಯಲ್ಲಿ ಕಾರು-ಬಸ್ ಅಪಘಾತ
ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ ಬಗ್ಗೆ ವರದಿಯಾಗಿದೆ. ಸೆಪ್ಟೆಂಬರ್ 7, 2025 ರಂದು ನಡೆದ ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ವಾಹನಗಳನ್ನು ಠಾಣೆಗೆ ಶಿಫ್ಟ್ ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ, ಸಾಗರ, ಭದ್ರಾವತಿ, ತೀರ್ಥಹಳ್ಳಿ, ಮಾಲೂರು, ಹೊಸಮನೆ, ಅಪಘಾತ, ಪೊಲೀಸ್, ಬಂಧನ, ಹಲ್ಲೆ, ರಸ್ತೆ ಅಪಘಾತ, ವೈದ್ಯಕೀಯ ನೆರವು, ಅಪರಾಧ, ಕರ್ನಾಟಕ ಸುದ್ದಿ, Shimoga, Sagar, Bhadravathi, Thirthahalli, Maluru, Hosamane, police, arrest, assault, road accident, medical aid, crime news, Karnataka news, news in shivamogga today