ಹೆದ್ದಾರಿಪುರದ ಜಂಬಳ್ಳಿ ತಿರುವಿನಲ್ಲಿ ಪತ್ರಿಕೆ ಸಾಗಿಸುತ್ತಿದ್ದ ಕಾರು ಪಲ್ಟಿ, ಒಬ್ಬರ ಸಾವು

ಹಂಚಿಕೊಳ್ಳಿ
WhatsApp Facebook X Telegram
malenadutoday image
malenadutoday image

ಸುದ್ದಿಯ ಸ್ಥಳ: Hosanagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ರಿಪ್ಪನ್‌ಪೇಟೆ / ವಿಜಯವಾಣಿ ಸಂಸ್ಥೆಯ ದಿನಪತ್ರಿಕೆಗಳನ್ನು ಸಾಗಿಸುತ್ತಿದ್ದ ಕಾರು ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದ ಜಂಬಳ್ಳಿ ತಿರುವಿನಲ್ಲಿ ಪಲ್ಟಿಯಾಗಿ, ಶಿವಮೊಗ್ಗದ ಬೊಮ್ಮನಕಟ್ಟೆ ನಿವಾಸಿ ಶಿವಕುಮಾರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಮೂಲದ ಮತ್ತೊಬ್ಬ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿವಮೊಗ್ಗದಿಂದ ವಿಜಯವಾಣಿ ದಿನಪತ್ರಿಕೆಗಳನ್ನು ತೀರ್ಥಹಳ್ಳಿಗೆ ತಲುಪಿಸಿದ ಬಳಿಕ ಕಾರು ರಿಪ್ಪನ್‌ಪೇಟೆಗೆ ಬರುತ್ತಿತ್ತು. ಈ ವೇಳೆ ಜಂಬಳ್ಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಗಾಯಗೊಂಡ ಶಿವಕುಮಾರ್ ಅವರು ರಿಪ್ಪನ್‌ಪೇಟೆ–ತೀರ್ಥಹಳ್ಳಿ ರಸ್ತೆಯಲ್ಲಿರುವ ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದಾರೆ.

ಗಾಯಾಳುವಿಗೆ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಮೃತ ಶಿವಕುಮಾರ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor