ಶಿವಮೊಗ್ಗ : ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ, ಗ್ರಾಮಾಂತರದಲ್ಲಿ ಪಾದಯಾತ್ರೆ, ಯಾವಾಗ ? 

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗಕ್ಕೆ ನಿಖಿಲ್_ ಕುಮಾರ್_ ಸ್ವಾಮಿ ಭೇಟಿ
ಶಿವಮೊಗ್ಗಕ್ಕೆ ನಿಖಿಲ್_ ಕುಮಾರ್_ ಸ್ವಾಮಿ ಭೇಟಿ

ಮಲೆನಾಡು ಟುಡೆ ಸುದ್ದಿ /ಶಿವಮೊಗ್ಗ: ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳನ್ನು ಆಲಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅ.12ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.12ರಂದು ಬೆಳಿಗ್ಗೆ 11.30ಕ್ಕೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಯದುವಾಳ–ಮುಡುವಾಳ ಮಾರ್ಗದಲ್ಲಿ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ನಡೆಸಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಹಾರನಹಳ್ಳಿ ಮೂಲಕ ಆಯನೂರಿಗೆ ತೆರಳಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಬಹಿರಂಗ ಸಭೆಯಲ್ಲಿ ಭಾಗವಹಿಸಿ ರೈತರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದರು.

ನಂತರ ಭದ್ರಾವತಿ ತಾಲ್ಲೂಕಿಗೆ ಆಗಮಿಸಲಿರುವ ಅವರು, ಅಂಡರ್‌ಬ್ರಿಡ್ಜ್ ಬಳಿಯ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಬಿ.ಹೆಚ್. ರಸ್ತೆಯ ಮೂಲಕ ತೆರಳಿ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ರಂಗಪ್ಪ ವೃತ್ತದ ಮೂಲಕ ತಾಲ್ಲೂಕು ಕಚೇರಿ ಬಳಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರಿಗೆ ಬರ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಪ್ರವಾಸ ನಡೆಸಿ ರೈತರೊಂದಿಗೆ ಚರ್ಚಿಸುತ್ತಿದ್ದಾರೆ. ರೈತರ ಎಲ್ಲ ಸಾಲಗಳನ್ನು ಸರ್ಕಾರ ಮನ್ನಾ ಮಾಡಬೇಕು ಎಂಬ ಒತ್ತಾಯದೊಂದಿಗೆ ಅವರು ರಾಜ್ಯದಾದ್ಯಂತ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದರು.

ಸರ್ಕಾರ ಎಕರೆಗೆ ₹2,500 ಬರ ಪರಿಹಾರ ಘೋಷಿಸಿದೆ. ಆದರೆ ಈ ಮೊತ್ತ ರೈತರ ಸಂಕಷ್ಟಕ್ಕೆ ಸಾಕಾಗುವುದಿಲ್ಲ. ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು. ಸತತ ಎಂಟು ಗಂಟೆ ವಿದ್ಯುತ್ ನೀಡುವ ಮೂಲಕ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಬರದಿಂದ ಜಾನುವಾರುಗಳಿಗೂ ತೊಂದರೆಯಾಗಿದ್ದು, ಮೇವಿನ ಕೊರತೆ ಉಂಟಾಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರಿಗೆ ಮೇವು ಪೂರೈಕೆಗೆ ವಿಶೇಷ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor