NMMS ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ | ಪೋಷಕರು, ವಿದ್ಯಾರ್ಥಿಗಳು ಗಮನಿಸಬೇಕಾದ ಮಾಹಿತಿ

ಹಂಚಿಕೊಳ್ಳಿ
WhatsApp Facebook X Telegram
Elephant Mahout Recruitment 2026

ಬೆಂಗಳೂರು : ಮಲೆನಾಡು ಟುಡೆ ಸುದ್ದಿ: ಶಾಲಾ ಗುಣಮಟ್ಟ ಮೌಲ್ಯಮಾಪನ ಮತ್ತು ಮಾನ್ಯತಾ ಪರಿಷತ್ತು 2025-26ನೇ ಸಾಲಿನ National Means-cum-Merit Scholarship ಪರೀಕ್ಷಾ ದಿನಾಂಕದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಮಾಪನ ಮತ್ತು ಮಾನ್ಯತಾ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗಾಗಿ ನಡೆಸುವ ಎನ್.ಎಂ.ಎಂ.ಎಸ್. ಪರೀಕ್ಷೆಯನ್ನು ಈ ಹಿಂದೆ ದಿನಾಂಕ 18.01.2026 ರ ಭಾನುವಾರದಂದು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಅಂದು ನಡೆಸಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರಿಷ್ಕೃತ ವೇಳಾಪಟ್ಟಿಯಂತೆ ದಿನಾಂಕ 01.02.2026 ರ ಭಾನುವಾರದಂದು ರಾಜ್ಯಾದ್ಯಂತ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

NMMS Scholarship Exam
NMMS Scholarship Exam

ಈ ಬದಲಾವಣೆಯ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕುಗಳು ಮತ್ತು ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡುವಂತೆ ಸೂಚಿಸಲಾಗಿದೆ. ಪರೀಕ್ಷಾ ದಿನಾಂಕದಲ್ಲಿ ಉಂಟಾಗಿರುವ ಬದಲಾವಣೆಯ ಮಾಹಿತಿಯು ಎಲ್ಲಾ ವಿದ್ಯಾರ್ಥಿಗಳಿಗೆ ತಲುಪುವಂತೆ ನೋಡಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಸಕಾಲದಲ್ಲಿ ಪರೀಕ್ಷೆಗೆ ಹಾಜರಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತತ್ಸಂಬಂದ ಹೊರಡಿಸಲಾಗಿರುವ ಸೂಚನೆಯಲ್ಲಿ ತಿಳಿಸಲಾಗಿದೆ.

NMMS Scholarship Exam
NMMS Scholarship Exam
NMMS Scholarship Exam 2025-26 Postponed: New Dates Announced for Karnataka  NMMS ವಿದ್ಯಾರ್ಥಿವೇತನ ಪರೀಕ್ಷೆ ಮುಂದೂಡಿಕೆ: ಹೊಸ ದಿನಾಂಕ ಪ್ರಕಟ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

NMMS Scholarship Exam
NMMS Scholarship Exam

 

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor