Shivamogga Feb 12, 2024 | ಮೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ನಾಳೆ ಅಂದರೆ ಫೆಬ್ರವರಿ 13 ರಂದು (Feb 13, 2024) ಪವರ್ ಕಟ್ ಇರಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೆಸ್ಕಾಂ ತೀರ್ಥಹಳ್ಳಿ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಈ ಪ್ರಕಟಣೆಯನ್ನ ನೀಡಿದ್ದಾರೆ.
ಪ್ರಕಟಣೆಯಲ್ಲಿ ಏನಿದೆ.
ಹಾಲಾಡಿ 110 / 111ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಬ್ರೇಕರ್ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಕಾಮಗಾರಿ ಇರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಸಲಾಗಿದೆ.
110 ಕೆ ವಿ ಕಮರಡಿ ಹಾಗೂ 110 ಕೆ ವಿ ತೀರ್ಥಳ್ಳಿ ಉಪ ಕೇಂದ್ರಗಳಿಂದ ಹೊರಡುವ ಎಲ್ಲಾ 11 ಕೆ ವಿ ಮಾರ್ಗಗಳ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಗ್ರಾಹಕರು,ಸಾರ್ವಜನಿಕರು ಸಹಕರಿಸಬೇಕಾಗಿ ತೀರ್ಥಹಳ್ಳಿ ಮವಿಸಕಂನಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
