ಸ್ಮಶಾನ ಭೂಮಿ ಒತ್ತುವರಿ ಆಗಿದ್ರೆ ಈ ವಿಚಾರ ತಿಳಿದುಕೊಳ್ಳಿ! ಮೆಸ್ಕಾಂ ಪ್ರಕಟಣೆ ಏನು ಗೊತ್ತಾ? ವಿವಿಧ ಶಾಲೆಗಳಲ್ಲಿ ಮಕ್ಕಳ ಸೇರ್ಪಡೆಗೆ ಅರ್ಜಿ ಆಹ್ವಾನ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

Notice to remove encroachment on graveyard land. Do you know what mescom's announcement is? Applications invited for admission of children in various schools! Here's where to find out

ಸ್ಮಶಾನ ಭೂಮಿ ಒತ್ತುವರಿ ಆಗಿದ್ರೆ ಈ ವಿಚಾರ ತಿಳಿದುಕೊಳ್ಳಿ! ಮೆಸ್ಕಾಂ  ಪ್ರಕಟಣೆ ಏನು ಗೊತ್ತಾ?  ವಿವಿಧ ಶಾಲೆಗಳಲ್ಲಿ ಮಕ್ಕಳ ಸೇರ್ಪಡೆಗೆ ಅರ್ಜಿ ಆಹ್ವಾನ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ May 16, 2023 GOOGLE NEWS / SHIVAMOGGA NEWS

ನವೋದಯ ಶಾಲೆ;  11 ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‍ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೆ.ಎಸ್.ಎಸ್. ವಿಶೇಷಚೇತನರ ಪಾಲಿಟೆಕ್ನಿಕ್‍ನಿಂದ ಡಿಪ್ಲೊಮಾ ಸೇರಲು ಅರ್ಜಿ ಆಹ್ವಾನ

2023-24 ನೇ ಸಾಲಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲಿನ ಹನಸವಾಡಿ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ಹೆಣ್ಣು ಮಕ್ಕಳ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ದಾಖಲೆಗಳ ಸಹಿತ ಡಾ||ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಕಾಲೇಜಿಗೆ ತೆರಳಿ ಪ್ರಾಂಶುಪಾಲರ ಮೂಲಕ  ಮೇ- 25 ರೊಳಗೆ ಉಚಿತವಾಗಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಶೇಕಡ 75% ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇಕಡ 25% ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳಿಗೆ ಮೀಸಲಿರಿಸಲಾಗಿದೆ. 

ಬಸ್​ನಲ್ಲಿಯೇ ಹೆರಿಗೆ ಮಾಡಿಸಿದ ಲೇಡಿ ಕಂಡಕ್ಟರ್! ಸೈ ಎನ್ನುತ್ತಿದೆ ಕರ್ನಾಟಕ

ಅಲ್ಪಸಂಖ್ಯಾತರ ಯಾವುದೇ ವಸತಿ ಶಾಲೆ/ ಸರ್ಕಾರಿ/ ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಗಳಲ್ಲಿ 10ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ರೂ.2.50 ಲಕ್ಷಗಳನ್ನು ಮೀರಿರಬಾರದು. ವಿಕಲಚೇತನರಿಗೆ ಶೇ.3% ರಷ್ಟು ಪ್ರವೇಶ ಮೀಸಲಿರಿಸಿದೆ.

ಬಸ್​ನಲ್ಲಿಯೇ ಹೆರಿಗೆ ಮಾಡಿಸಿದ ಲೇಡಿ ಕಂಡಕ್ಟರ್! ಸೈ ಎನ್ನುತ್ತಿದೆ ಕರ್ನಾಟಕ

ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಪಠ್ಯಪುಸ್ತಕ, ಆಹಾರ ಮತ್ತು ವಸತಿ, ಸಮವಸ್ತ್ರ, ಶುಚಿ ಸಂಭ್ರಮ ಕಿಟ್, ಲೇಖನ ಸಾಮಗ್ರಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ತಾಂತ್ರಿಕ ಮತ್ತು ವೈದ್ಯಕೀಯ ಮತ್ತು ಇತ್ಯಾದಿ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗಲು ವಿಜ್ಞಾನ ವಿಷಯಗಳಿಗೆ ಹಾಗೂ ವಾಣಿಜ್ಯ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು. ವೃತ್ತಿಪರ ಕೋರ್ಸ್‍ಗಳ (ಎನ್‍ಇಇಟಿ/ಜೆಇಇ(ಮೇನ್ಸ್ ಅಂಡ್ ಅಡ್ವಾನ್ಸ್‍ಡ್)/ ಕೆಸಿಇಟಿ) ಪ್ರವೇಶ ಪರೀಕ್ಷೆಗೆ ವಿಶೇಷ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಡಾ||ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರ ದೂರವಾಣಿ ಸಂಖ್ಯೆ : 08182 – 220206 / 9483623537 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೆ.ಎಸ್.ಎಸ್. ವಿಶೇಷಚೇತನರ ಪಾಲಿಟೆಕ್ನಿಕ್‍ನಿಂದ ಡಿಪ್ಲೊಮಾ ಸೇರಲು ಅರ್ಜಿ ಆಹ್ವಾನ

ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠ, ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ ಮೂರು ವರ್ಷಗಳ ವಿವಿಧ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/  ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಜರ್ ಅಸಿಸ್ಟೆಂಟ್‍ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಕಂಪ್ಯೂಟರ್ ಅಪ್ಲಿಕೇಷನ್ಸ್ ಹಾಗೂ ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಿಜಿ ಕೋರ್ಸುಗಳಿಗೆ ಕರ್ನಾಟಕ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊಂದಿಗೆ ತೇರ್ಗಡೆ ಹಾಗೂ 40% ಮತ್ತು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ , 60ಡಿಬಿ ಮತ್ತು ಮೇಲ್ಪಟ್ಟು ಕಿವುಡು ಮತ್ತು ಮೂಗು ಅಂಗವಿಕಲತೆ ಹಾಗೂ ಭಾಗಶಃ ಮತ್ತು ಪೂರ್ಣ ಅಂಧತ್ವ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು. 

ಕ್ರೈಸ್ತ ಸನ್ಯಾಸಿನಿಯಾಗಲು ಕಿಡ್ನ್ಯಾಪ್ ಕಥೆ ಹಣೆದ ಯುವತಿಯನ್ನ ಶಿವಮೊಗ್ಗ ಪೊಲೀಸರು ಪತ್ತೆ ಮಾಡಿದ್ದು ಹೇಗೆ ಗೊತ್ತಾ

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ.  ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.  ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.

ಪ್ರವೇಶಕ್ಕೆ ಅರ್ಜಿಗಳನ್ನು ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-570006 ಇಲ್ಲಿಗೆ (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 100/- ಹಾಗೂ ಎಸ್‍ಸಿ/ಎಸ್‍ಟಿ/ಸಿ-1 ವರ್ಗದವರಿಗೆ ರೂ. 50/-) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಅಥವಾ ವೆಬ್‍ಸೈಟ್ www.jsspda.org ಮೂಲಕ  ಡೌನ್‍ಲೋಡು ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ದಿ:17/06/2023ರೊಳಗಾಗಿ ಕಚೇರಿಗೆ ತಲುಪಿಸುವಂತೆ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ಹಾಗು ಮೊ.ಸಂ.: 9844644937 ನ್ನು ಸಂಪರ್ಕಿಸುವುದು. 

whatsapp / ಶ್ರೀಘ್ರದಲ್ಲಿ ವಾಟ್ಸ್ಯಾಪ್​ನಲ್ಲಿ ಬರಲಿದೆ ಈ ಆಪ್ಶನ್​! ತಲೆಬಿಸಿ ಕಮ್ಮಿ ಮಾಡಿದ ಮೆಟಾ ಸಂಸ್ಥೆ


ಸ್ಮಶಾನ ಭೂಮಿಗೆ ಕಾಯ್ದಿರಿಸಿದ ಜಮೀನು ಒತ್ತುವರಿ ತೆರುವುಗೊಳಿಸಲು ಸೂಚನೆ

ಶಿವಮೊಗ್ಗ ತಾಲೂಕಿನ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿಗಳನ್ನು ಜಾಗ ಲಭ್ಯತೆ ಅನುಸಾರವಾಗಿ ಈಗಾಗಲೇ ಕಾಯ್ದಿರಿಸಲಾಗಿದ್ದು, ಕಾಯ್ದಿರಿಸಿದ ಪ್ರದೇಶಗಳಲ್ಲಿ ಒತ್ತುವರಿ ಆಗಿದ್ದಲ್ಲಿ ತೆರುವುಗೊಳಿಸಲು ಸರ್ಕಾರದ ನಿರ್ದೇಶನ ಇರುವುದರಿಂದ ಇಂತಹ ಒತ್ತುವರಿ ಪ್ರಕರಣಗಳು ಇದ್ದಲ್ಲಿ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಕಚೇರಿಗೆ ಮಾಹಿತಿ ನೀಡಲು ಸೂಚಿಸಿದೆ. 


ಮೆಸ್ಕಾಂ ಜನ ಸಂಪರ್ಕ ಸಭೆ

 ಮೆಸ್ಕಾಂ ನಗರ ಉಪವಿಭಾಗ-2 ಕಚೇರಿ, ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಶಿವಮೊಗ್ಗ ಇಲ್ಲಿ ಮೇ-20ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಿ ಗ್ರಾಹಕರ ಅಹವಾಲುಗಳನ್ನು  ಸ್ವೀಕರಿಸುವುದರಿಂದ ಈ ಅವಕಾಶವನ್ನು ಈ ಉಪ ವಿಭಾಗ ವ್ಯಾಪ್ತಿಯ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ರಂಗಾಯಣದಿಂದ ಇಲ್ಲೊಂದು ಉತ್ತಮ ಅವಕಾಶ! ಈಗಲೇ ಅರ್ಜಿ ಸಲ್ಲಿಸಬಹುದು!

ಶಿವಮೊಗ್ಗ/     ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಪ್ರತಿವರ್ಷ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ನಡೆಸುತ್ತಿದ್ದು, 2023-24ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಏನಿದು ಅವಕಾಶ!

ಕಳೆದ 14 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗ ಶಿಕ್ಷಣವನ್ನು ನೀಡುವ ಸಂಸ್ಥೆ ಇದಾಗಿದ್ದು, ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ಚವಿದ್ಯಾಲಯದ ಮಾನ್ಯತೆ ಪಡೆದಿದೆ. 

2023-24ನೇ ಸಾಲಿನ ಈ ರಂಗತರಬೇತಿ ಕೋರ್ಸ್‍ಗೆ  ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ ರೂ.5,000/-ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.

ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ದಿನಾಂಕ:15-05-2023ರಿಂದ ರಂಗಾಯಣದ ವೆಬ್‍ಸೈಟ್ http://rangayanamysore.karnataka.gov.in ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಕೆಲಸದ ದಿನಗಳ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಪಡೆಯಬಹುದು.

ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230/-, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180/-ಗಳು (ರಂಗಕೈಪಿಡಿ ಶುಲ್ಕ ರೂ.30/- ಒಳಗೊಂಡಂತೆ) ಡಿ.ಡಿ.ಯನ್ನು  ಉಪ ನಿರ್ದೇಶಕರು, ರಂಗಾಯಣ, ಮೈಸೂರು (Deputy Director, Rangayana, Mysore) ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ದಿನಾಂಕ:05-06-2023 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು. 

ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಕ್ಕಾಗಿ ದೂರವಾಣಿ ಸಂಖ್ಯೆ:0821-2512639, 9448938661 / 9148827720 / 8867514311 ಅನ್ನು ಸಂಪರ್ಕಿಸುವುದು.

FINAL ಫಲಿತಾಂಶ/ ಶಿವಮೊಗ್ಗ ಜಿಲ್ಲೆಯಲ್ಲಿ ಗೆದ್ದವರು ಯಾರು? ಸೋತವರು ಯಾರು?  ಅಂತಿಮ ರಿಸಲ್ಟ್​ನಲ್ಲಿ ಇರುವ ಕುತೂಹಲ ಅಂಶಗಳೇನು ತಿಳಿಯಿರಿ 

Malenadutoday.com Social media