ಮಹಾವೀರ ಸರ್ಕಲ್‌ನಲ್ಲಿ ಮಳೆಯಲ್ಲಿಯೂ ವಿದ್ಯಾರ್ಥಿಗಳ ಪ್ರತಿಭಟನೆ | ಡಿಸಿಗೆ ಮನವಿ|ಕಾರಣ?

NSUI staged a protest in Shivamogga demanding a high-level inquiry into alleged irregularities in the NEET examination.

ಮಹಾವೀರ ಸರ್ಕಲ್‌ನಲ್ಲಿ ಮಳೆಯಲ್ಲಿಯೂ ವಿದ್ಯಾರ್ಥಿಗಳ ಪ್ರತಿಭಟನೆ | ಡಿಸಿಗೆ ಮನವಿ|ಕಾರಣ?
NSUI protest ,Shivamogga , NEET examination

 

SHIVAMOGGA | MALENADUTODAY NEWS | Jun 10, 2024 ಮಲೆನಾಡು ಟುಡೆ 

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತಪಡಿಸಿ ಹಾಗೂ ಈ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಬೇಕು ಎಂದು ಆಗ್ರಹಿಸಿ  NSUI  ವಿದ್ಯಾರ್ಥಿ ಸಂಘಟನೆ ಇಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ.  

 

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ. 

 

ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು 67 ವಿದ್ಯಾರ್ಥಿಗಳು ಮೊದಲ ರ‍್ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ 8 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಮಾಡಿರುವುದು ನೀಟ್ ಅಕ್ರಮ ನಡೆದಿರುವುದರ ಬಗ್ಗೆ ಅನುಮಾನ ಮೂಡಿಸಿದೆ. ರ‍್ಯಾಂಕ್ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನಷ್ಟು ಅನುಮಾನಗಳನ್ನು ಹುಟ್ಟಿಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂಬುದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ. 

 

ಈ ಸಂಬಂಧ ಶಿವಮೊಗ್ಗ ನಗರದ ಮಹಾವೀರ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಡಿಸಿ ಕಚೇರಿ ಎದುರು ಧರಣಿ ನಡೆಸಿ ಮನವಿ ಸಲ್ಲಿಸಿದ್ರು. ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಮುಖಂಡ  H.C ಯೋಗೇಶ್ ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ ಎಂದರು

 

NSUI staged a protest in Shivamogga demanding a high-level inquiry into alleged irregularities in the NEET examination.