COURT LIVE

ಶಿವಮೊಗ್ಗದಲ್ಲಿ ಇದೇ ಮೊದಲು! ಅಧಿಕಾರಿಗೆ 2 ವರ್ಷ ಜೈಲು! ಕಾರಣ ಓದಿ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಅಪರೂಪ ಎಂಬಂತೆ ಕೇಸ್​ವೊಂದರಲ್ಲಿ ಅಧಿಕಾರಿಯೊಬ್ಬರಿಗೆ ಶಿಕ್ಷೆಯಾಗಿದೆ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಯನ್ನ ಶಿಕ್ಷೆಗೆ ಗುರಿಪಡಿಸಲಾಗಿದೆ. ಪ್ರಕರಣದಲ್ಲಿ ಅಧಿಕಾರಿಗೆ ಎರಡು ವರ್ಷ ಶಿಕ್ಷೆ ಯಾಗಿದೆ. ಅಲ್ಲದೆ 40 ಸಾವಿರ ದಂಡ ವಿಧಿಸಲಾಗಿದೆ.

ಅಧಿಕಾರಿಗೆ 2 ವರ್ಷ ಜೈಲು
ಅಧಿಕಾರಿಗೆ 2 ವರ್ಷ ಜೈಲು

ಕೋರ್ಟ್ ಪ್ರಕರಣ /ಅಧಿಕಾರಿಗೆ 2 ವರ್ಷ ಜೈಲು

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಿಕೊಡಲು ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಧಿಕಾರಿಯೊಬ್ಬರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ 2 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪ್ರಕರಣದ ವಿವರ

ಸಾಗರ ತಾಲೂಕಿನ ಹೊಸಗುಂದ ಗ್ರಾಮದಶ್ರೀ ಹೆಚ್.ಎಸ್. ಜನಾರ್ದನ ಅವರು 2015-16ನೇ ಸಾಲಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಾಗಿ ಅರ್ಜಿ ಸಲ್ಲಿಸಿದ್ದರು. ಕೊಳವೆಬಾವಿ ಕೊರೆಯಿಸಿಕೊಡುವ ಸಲುವಾಗಿ ನಿಗಮದ ಶಿವಮೊಗ್ಗ ಕಚೇರಿಯ ಜಿಲ್ಲಾ ವ್ಯವಸ್ಥಾಪಕರಾದ ಆರ್.ಎಸ್. ಪರಮೇಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಅಧಿಕಾರಿಗೆ 2 ವರ್ಷ ಜೈಲು
ಅಧಿಕಾರಿಗೆ 2 ವರ್ಷ ಜೈಲು

ದಿನಾಂಕ 13-07-2017 ರಂದು ಕಚೇರಿಯಲ್ಲಿ 10,000 ರೂ. ಲಂಚ ಪಡೆಯುವಾಗ ಆರೋಪಿಯನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದಿನಾಂಕ 02-04-2026 ರಂದು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎಂ.ಡಿ. ಸುಂದರ್ ರಾಜ್ ಅವರು ವಾದ ಮಂಡಿಸಿದ್ದರು.

ಗಂಗಾ ಕಲ್ಯಾಣ ಯೋಜನೆಯಡಿ ಲಂಚ: ಅಧಿಕಾರಿಗೆ 2 ವರ್ಷ ಜೈಲು, 40 ಸಾವಿರ ದಂಡBribe for Ganga Kalyana Scheme: Officer Gets 2 Years Jail and 40K Fine in Shivamogga

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ