ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟ್ರೋಲ್​ ತಪ್ಪಿದ ಒಮಿನಿ! ಚರಂಡಿಗೆ ಉರುಳಿ ಅಪಘಾತ!

Omini loses control on Sagar National Highway

ಹಂಚಿಕೊಳ್ಳಿ
WhatsApp Facebook X Telegram
ಸುದ್ದಿ ಸಾರಾಂಶ

Omini loses control on Sagar National Highway

KARNATAKA NEWS/ ONLINE / Malenadu today/ May 19, 2023 SHIVAMOGGA NEWS

ಸಾಗರ/ ತಾಲ್ಲೂಕಿನ ಐಗಿನ್ ಬೈಲ್ ಸಮೀಪ ಹಾದು ಹೋಗುವ ರಾಷ್ಟ್ರೀ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ರಸ್ತೆ ಪಕ್ಕದ ಚರಂಡಿಗೆ ಉರುಳಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾಋಎ. 

ಗಾಯಾಳುಗಳನ್ನು ಸಾರಿಗೆ ಇಲಾಖೆಯ ನಿವೃತ್ತ ನೌಕರ ನಿಂಗಪ್ಪ ಹಾಗೂ ಅವರ ಪತ್ನಿ ಗೌರಮ್ಮ ಎಂದು ಗುರುತಿಸಲಾಗಿದೆ. ಸಾಗರದಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಿವಮೊಗ್ಗಕ್ಕೆ ವಾಪಸ್ ಹೋಗುತ್ತಿದ್ದರು. ಈ ವೇಳೆ  ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಆನಂದಪುರದಲ್ಲಿ ಅಪಘಾತ/ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ! ಹಿಟ್ & ರನ್​ ಘಟನೆಯಲ್ಲಿ ಪಾದಚಾರಿ ಸಾವು!

ಸಾಗರ/ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪಾದಚಾರಿಯೊಬ್ಬರಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 

ಇಲ್ಲಿನ ಯೆಡೆಹಳ್ಳಿಯ ಪೆಟ್ರೋಲ್ ಬಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು , ಅಲ್ಲಿಂದ ಎಸ್ಕೇಪ್​ ಆಗಿದೆ. ನಿನ್ನೆ ರಾತ್ರಿ ನಡೆದ ಘಟನೆ ಯಲ್ಲಿ 56 ವರ್ಷದ ಶಿವಕುಮಾರ್ ಎಂಬವರು, ಗಂಭೀರವಾಗಿ ಗಾಯಗೊಂಡಿದ್ದರು.ತಕ್ಷಣವೇ ಅವರನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ದಾಖಲಾಗಿದೆ. 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor