ಸೆಪ್ಟೆಂಬರ್ 15 ರಂದು ಶಿವಮೊಗ್ಗದ ಮುಖ್ಯ ಪ್ರದೇಶಗಳಲ್ಲಿಯೇ ಇರೋದಿಲ್ಲ ವಿದ್ಯುತ್ ! ಮೆಸ್ಕಾಂ ಪ್ರಕಟಣೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS 

ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆ.15 ರ ಬೆಳಗ್ಗೆ 09-30 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಂ.ಆರ್.ಎಸ್ ವಾಟರ್ ಸಪ್ಲೇ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್, ಗುರುಪುರ

ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಮತ್ತು ಬಿ.ಹೆಚ್ ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ತಿಲಕ್ ನಗರ, ಸರ್.ಎಂ.ವಿ ರಸ್ತೆ, ಬಾಲ್‍ರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವಂಟ್ ರಸ್ತೆ, ಬಾಪುಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್ ಬಡಾವಣೆ, ಟ್ಯಾಂಕ್ ಬೌಂಡ್ ರಸ್ತೆ ಹಾಗೂ ಮೀನಾಕ್ಷಿ ಭವನದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.


ಇನ್ನಷ್ಟು ಸುದ್ದಿಗಳು 


 

Leave a Comment