ಒಂದು ದಿನ ಶಿವಮೊಗ್ಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಇರೋದಿಲ್ಲ ವಿದ್ಯುತ್ ! ಪವರ್ ಕಟ್ ನ ವಿವರ ಇಲ್ಲಿದೆ

Shivamogga Mar 9, 2024   ಇದೇ ಮಾರ್ಚ್​ 10 ರಂದು ಬೆಳಗ್ಗೆಯಿಂದ ಸಂಜೆವರೆಗೂ ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್  ಇರಲಿದೆ ಎಂದು ಮೆಸ್ಕಾಂ ಶಿವಮೊಗ್ಗ  ತಿಳಿಸಿದೆ. ಈ ಸಂಬಂಧ ಹೊರಡಿಸಿರುವ ಪ್ರಕಟಣೆ ಇಲ್ಲಿದೆ

ಮೆಸ್ಕಾಂ ಪ್ರಕಟಣೆ 

ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.

Leave a Comment