ಕೆಲವು ದಿನಗಳಿಂದ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡು್ತಾ ಆತಂಕ ಮೂಡಿಸಿದ್ದವು. ಈ ಪೈಕಿ ನಿನ್ನೆ ಸೋಮವಾರ ಒಂದು ಚಿರತೆಯನ್ನು ಸೆರೆಹಿಡಿಯಲಾಗಿದೆ.
ಚಿರತೆ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು.
ಹೆರಿಗೆ ವಾರ್ಡ್ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ
ನಿನ್ನೆ ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ ಬಿದ್ದ ಚಿರತೆಯನ್ನು ತ್ಯಾವರೆಕೊಪ್ಪ ಹುಲಿ-ಸಿಂಹಾಧಾಮಕ್ಕೆ ಕೊಂಡೊಯ್ದಿದ್ದಾರೆ. ಮತ್ತೊಂದು ಚಿರತೆ ಗ್ರಾಮದ ಸುತ್ತಮುತ್ತ ಸಂಚರಿಸುತ್ತಿದ್ದು, ಆ ಚಿರತೆಯ ಸೆರೆಗೂ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
