ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!

One person dies after being struck by lightning while standing in a temple! Four injured!

ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಭಾನುವಾರ ಈ ಘಟನೆ ಸಂಭವಿಸಿದ್ದು, ಇಲ್ಲಿನ ಗಂಜೀಗೆರೆ ಮೂಲದ ಮುಖೇಶ್ ಸಾವನ್ನಪ್ಪಿದ್ದಾರೆ. 

ತರೀಕೆರೆ ತಾಲೂಕಿನ ಬಾವಿಕೆರೆಯ ಮುಖೇಶ್​ ದೇವಸ್ಥಾನಕ್ಕೆ ತೆರಳಿದ್ದರು, ಅಲ್ಲಿ ದೇವಾಲಯದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ. ಇದೇ ವೇಳೆ ಅಲ್ಲಿದ್ದ ನಾಲ್ವರಿಗ ಗಾಯಗಳಾಗಿವೆ. ಅವರಿಗೆ  ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. 


ಭದ್ರಾವತಿಯಲ್ಲಿಂದು ವಿದ್ಯುತ್ ವ್ಯತ್ಯಯ

ಭದ್ರಾವತಿ/ ತಾಲೂಕಿನ ಮೆಸ್ಕಾಂ ಲಕ್ಕವಳ್ಳಿ66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇವತ್ತು ಅಂದರೆ,   ಜೂ.13ರಂದು ಬೆಳಿಗ್ಗೆ 9ಗಂಟೆಯಿಂದ ಸಂಜೆ 6 ಗಂಟೆವರೆಗೆ  ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನೆಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.