ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

Online Application Invitation for Admission to Post Matric Hostelsಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS  

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ಆದಾಯ ಮಿತಿ ರೂ.1,00 ಲಕ್ಷ ಗಳು  ಇರುತ್ತದೆ. 

ಆಸಕ್ತ ವಿದ್ಯಾರ್ಥಿಗಳು http://shp.karnataka.gov.in ರಲ್ಲಿ ಅ.10ರೊಳಗಾಗಿ ಅರ್ಜಿ ಸಲ್ಲಿಸುವುದು.  ಅರ್ಜಿ ಸಲ್ಲಿಸಲು ಹಾಗೂ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ವೀಕ್ಷಿಸುವುದು.

ತಾಂತ್ರಿಕ ತೊಂದರೆಗಳಾದಲ್ಲಿ ಹಾಗೂ  ಹೆಚ್ಚಿನ ಮಾಹಿತಿಗಾಗಿ  bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಸಂಖ್ಯೆ 805077005/08182-222129, ಶಿವಮೊಗ್ಗ -08182-240078, ಭದ್ರಾವತಿ-08282-264644, ತೀರ್ಥಹಳ್ಳಿ- 08181-296096, ಸಾಗರ-08183-298014, ಸೊರಬ- 08184- 295893, ಹೊಸನಗರ- 08185- 295050 ಹಾಗೂ ಶಿಕಾರಿಪುರ- 08187-295207 ಗಳನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆ ತಿಳಿಸಿರುತ್ತಾರೆ.


ಇನ್ನಷ್ಟು ಸುದ್ದಿಗಳು