Online frauds ಷೇರು ಮಾರುಕಟ್ಟೆ ಹೂಡಿಕೆ ಆಮಿಷ: ವಾಟ್ಸಾಪ್ ವಂಚನೆಗೆ ₹34 ಲಕ್ಷ ಕಳೆದುಕೊಂಡ ಶಿವಮೊಗ್ಗದ ವ್ಯಕ್ತಿ!
ಶಿವಮೊಗ್ಗ: ಅಪರಿಚಿತ ವಾಟ್ಸಾಪ್ ಸಂದೇಶವನ್ನು ನಂಬಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಆಮಿಷಕ್ಕೆ ಬಲಿಯಾದ ಶಿವಮೊಗ್ಗದ ಬಿ.ಬಿ. ಸ್ಟ್ರೀಟ್‌ನ ನಿವಾಸಿಯೊಬ್ಬರು ಬರೋಬ್ಬರಿ 34 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ಈ ಸಂಬಂಧ ವಂಚನೆಗೊಳಗಾದ ವ್ಯಕ್ತಿ ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Online frauds ಏನಿದು ಘಟನೆ?
ಘಟನೆ ಮೇ ತಿಂಗಳಿನಲ್ಲಿ ನಡೆದಿದೆ. ಬಿ.ಬಿ. ಸ್ಟ್ರೀಟ್‌ನ ನಿವಾಸಿಯೊಬ್ಬರಿಗೆ (ಹೆಸರು ಗೌಪ್ಯ) ಅಪರಿಚಿತ ವಾಟ್ಸಾಪ್ ಸಂಖ್ಯೆಯಿಂದ ಸಂದೇಶವೊಂದು ಬಂದಿತ್ತು. ಆ ಸಂದೇಶದಲ್ಲಿ ನಿರ್ದಿಷ್ಟ ಕಂಪನಿಯೊಂದರ ಹೆಸರನ್ನು ಉಲ್ಲೇಖಿಸಿ, ತಮ್ಮ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದೆಂದು ಆಮಿಷ ಒಡ್ಡಲಾಗಿತ್ತು.

ಈ ಆಮಿಷವನ್ನು ನಂಬಿದ ದೂರುದಾರರು, ಕಳೆದ ಎರಡು ತಿಂಗಳಲ್ಲಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಒಟ್ಟು ₹34,16,000 ಹಣವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಹಣ ಹೂಡಿಕೆ ಮಾಡಿದ ನಂತರ, ಆರೋಪಿಗಳು ಫೋನ್ ಕರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿ, ಹೂಡಿಕೆಯ ಲಾಭಾಂಶವನ್ನು ನೀಡದೆ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಪ್ರಸ್ತುತ, ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಂಚಕರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.