POLITICS

ಖಾಸಗಿ ವಿರುದ್ಧ ಶಾಸಕ ಎಸ್​.ಎನ್​ ಚೆನ್ನಬಸಪ್ಪರಿಗೆ ವಿದ್ಯಾರ್ಥಿಗಳ ಅಹವಾಲು!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Private Veterinary Colleges / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದಲ್ಲಿ ಹೊಸದಾಗಿ ಖಾಸಗಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುತ್ತಿರುವುದನ್ನೂ ವಿರೋಧಿಸಿ ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಾಸಕ ಎಸ್​ಎನ್​ ಚೆನ್ನಬಸಪ್ಪರವರಿಗೆ ಅಹವಾಲು ಸಲ್ಲಿಸಿದ್ರು. ಶಿವಮೊಗ್ಗ ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ (Private Veterinary Colleges) ಭೇಟಿ ನೀಡಿದ್ದ ವೇಳೆ ಶಾಸಕರಿಗೆ ವಿದ್ಯಾರ್ಥಿಗಳು ಈ ಬಗ್ಗೆ ಮನವಿ ನೀಡಿ, ಖಾಸಗಿ ವಿವಿಗಳ ಸ್ಥಾಪನೆಗೆ ಅನುವು ಮಾಡಿಕೊಡಬಾರದು ಎಂದು ಒತ್ತಾಯಿಸಿದ್ರು.

ಬಳಿಕ ಮಾತನಾಡಿದ ಶಾಸಕರು, ರಾಜ್ಯದಲ್ಲಿ ಹೊಸದಾಗಿ ಖಾಸಗಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುತ್ತಿರುವುದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಆತಂಕವಿದೆ. ಇದರಿಂದ ಉನ್ನತ ಶಿಕ್ಷಣದ ಮೂಲಸೌಕರ್ಯ ಹಾಗೂ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಯುವ ಪಶು ವೈದ್ಯರ ಉದ್ಯೋಗಾವಕಾಶಗಳನ್ನು ಕುಂಠಿತಗೊಳಿಸುತ್ತದೆ ಹಾಗೂ ಸರ್ಕಾರಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಪ್ರಾಮುಖ್ಯತೆಯನ್ನೂ ಕಡಿಮೆ ಮಾಡುತ್ತದೆ ಎಂದರು.

“ಪಶು ವೈದ್ಯಕೀಯ ವೃತ್ತಿಯ ದೀರ್ಘಕಾಲೀನ ಉನ್ನತಿಗಾಗಿ ಹಾಗೂ ರಾಜ್ಯದ ಪ್ರಗತಿಗಾಗಿ ಶ್ರಮಿಸುತ್ತಿರುವ ವಿದ್ಯಾರ್ಥಿಗಳ ಹಿತ ಕಾಯುವುದು ಅತ್ಯಗತ್ಯ. ವಿದ್ಯಾರ್ಥಿಗಳು ನೀಡಿರುವ ಈ ಸುದೀರ್ಘ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ವಿಷಯವನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕಾಗಿ ಪ್ರಾಮಾಣಿಕವಾಗಿ ಒತ್ತಾಯಿಸಲಾಗುವುದು

ಎಸ್​.ಎನ್​ ಚೆನ್ನಬಸಪ್ಪ, ಶಿವಮೊಗ್ಗ ನಗರ ಶಾಸಕರು

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ