Coastal and Malnad Districts / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಬಾರದ ಮಳೆಯ ನಿರೀಕ್ಷೆಯಲ್ಲಿರುವ ಮನಗಳಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇವತ್ತು ಅಂದರೆ ಗುರುವಾರ ಮತ್ತು ನಾಳೆ ಶುಕ್ರವಾರ ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆಯಂತೆ
ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಎರಡೂ ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಮೂಲಕ ಭಾರೀ ಮಳೆಯಾಗುವ ಸಾಧ್ಯತೆಯನ್ನ ಹವಾಮಾನ ಇಲಾಖೆ ತಿಳಿಸಿದೆ. ಉಳಿದ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಉಳಿದಂತೆ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗಿನಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಅಂಥಾ ಹವಾಮಾನ ತಿಳಿಸಿದೆ. ಇವೆಲ್ಲದರ ಜೊತೆಯಲ್ಲಿ ಆಗಸ್ಟ್ 1ರಿಂದ ಮತ್ತೆ ಮಳೆಯ ತೀವ್ರತೆ ಕಡಿಮೆಯಾಗುವ ಸಂಭವವಿದೆ ಎಂದಿರುವ ಹವಾಮಾನ ಇಲಾಖೆ ಸಾಧಾರಣ ಮಳೆ ಮುಂದುವರಿಯುವ ಸೂಚನೆ ಕೊಟ್ಟಿದೆ.
